ಬಿಎಂಟಿಸಿ ಡಿಪೋದಲ್ಲಿ ಬೆಂಕಿ ಅವಘಡ; ಭಾರೀ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿಯಿಂದ ಹರಸಾಹಸ

ಬಿಎಂಟಿಸಿ ಡಿಪೋದಲ್ಲಿ ಬೆಂಕಿ ಅವಘಡ; ಭಾರೀ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿಯಿಂದ ಹರಸಾಹಸ

ಬೆಂಗಳೂರು: ಮಾಗಡಿ ರಸ್ತೆಯ ಸೀಗೆಹಳ್ಳಿ ಬಿಎಂಟಿಸಿ ಡಿಪೋ 35 ರ ಬಳಿ ಬೆಂಕಿ ಅವಘಡ ಸಂಭವಿಸಿದೆ. ಪ್ಲಾಸ್ಟಿಕ್ ವಸ್ತುಗಳಿದ್ದ ಗೋದಾಮಿಗೆ ಬೆಂಕಿ ಬಿದ್ದಿದೆ. ಸ್ಥಳದಲ್ಲಿ 6 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಸಿಬ್ಬಂದಿ ತೊಡಗಿದ್ದಾರೆ.

ಶಾರ್ಟ್ ಸರ್ಕ್ಯುಟ್ ನಿಂದ ಪ್ಲಾಸ್ಟಿಕ್ ಗೋದಾಮಿಗೆ ಬೆಂಕಿಹೊತ್ತಿಕೊಂಡಿದೆ ಎನ್ನಲಾಗಿದೆ. ಪ್ಲಾಸ್ಟಿಕ್ ವಸ್ತುಗಳು ಇರುವ ಹಿನ್ನೆಲೆ ಬೆಂಕಿ ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ಸಿಬ್ಬಂದಿಯಿಂದ ಹರಸಾಹಸ ಪಡುವಂತಾಗಿದೆ. ಗೋದಾಮಿಗೆ ಬೆಂಕಿ ಬಿದ್ದ ಹಿನ್ನೆಲೆ ಸುತ್ತಮುತ್ತ ಇದ್ದ 6 ಮರಗಳಿಗೂ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಭಾನುವಾರ ರಜೆ ಹಿನ್ನೆಲೆ ಗೋದಾಮಿನಲ್ಲಿ ಯಾರೂ ಇಲ್ಲದ ಕಾರಣ.. ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಹೇಳಲಾಗಿದೆ.

 

Source: newsfirstlive.com Source link