ಇಂದಿನಿಂದ ಅಧಿವೇಶನ; ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ; ಏನೆಲ್ಲಾ ಚರ್ಚೆಯಾಗಲಿದೆ?

ಇಂದಿನಿಂದ ಅಧಿವೇಶನ; ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ; ಏನೆಲ್ಲಾ ಚರ್ಚೆಯಾಗಲಿದೆ?

ಬೆಂಗಳೂರು: ಇಂದಿನಿಂದ ಅಧಿವೇಶನ ಆರಂಭವಾಗಲಿದ್ದು, ಸಿಎಂ ಬಸವರಾಜ್​​​​ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಹಣಿಯಲು ವಿಪಕ್ಷಗಳು ಮುಂದಾಗಿವೆ. ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಖಾಸಗಿ ಹೋಟೆಲ್​​ವೊಂದರಲ್ಲಿ ಸಂಜೆ ಜೆಡಿಎಸ್​ ಶಾಸಕಾಂಗ ಸಭೆ ನಡೆಯಲಿದೆ. ಸಭೆಯಲ್ಲಿ ಪಕ್ಷದ ಶಾಸಕರೊಂದಿಗೆ ಮಾಜಿ ಪ್ರಧಾನಿ ದೇವೇಗೌಡರು ಭಾಗಿಯಾಗಲಿದ್ದಾರೆ.

ಸದನದಲ್ಲಿ ಪ್ರಸ್ತಾಪಿಸಬೇಕಾದ ವಿಚಾರಗಳ ಬಗ್ಗೆ ಶಾಸಕರ ಜೊತೆ ಚರ್ಚೆ ನಡೆಯಲಿದೆ. ಕ್ಷೇತ್ರಕ್ಕೆ ಅನುದಾನ ಹಂಚಿಕೆ ತಾರತಮ್ಯ, ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಮಹಾದಾಯಿ ನೀರಾವರಿ ಯೋಜನೆ ಸೇರಿದಂತೆ ಹಲವು ವಿಚಾರಗಳ ಕುರಿತು ಸದನದಲ್ಲಿ ಪ್ರಸ್ತಾಪದ ಬಗ್ಗೆ ಚರ್ಚೆ ನಡೆಸಲಾಗುತ್ತದೆ.

ಬೆಲೆ ಏರಿಕೆ, ಕಾಡಾನೆ ಹಾವಳಿ, ಅತಿವೃಷ್ಟಿ, ಕೊರೋನಾ ನಿರ್ವಹಣೆ ಸೇರಿದಂತೆ ಹಲ ವಿಚಾರಗಳನ್ನ ಮುಂದಿಟ್ಟುಕೊಂಡು ಹೋರಾಡುವ ಕುರಿತು ಸಮಾಲೋಚನೆ ಸಾಧ್ಯತೆ ಇದೆ. ಅಲ್ಲದೆ, ಮುಂಬರುವ ಬಿಬಿಎಂಪಿ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ, ಪಕ್ಷದ ಸದಸ್ಯತ್ವ ನೋಂದಣಿ, ಪಕ್ಷ ಸಂಘಟನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಲಿದ್ದಾರೆ. ಈಗಾಗಲೇ ಪಕ್ಷದ ಎಲ್ಲಾ ಶಾಸಕರು, ಪರಿಷತ್ ಸದಸ್ಯರಿಗೆ ಸಭೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ‘ಅಪ್ಪ ಅಮ್ಮನಿಲ್ಲದ ಕೂಸು ಅನಾಥ, ಸತ್ಯ ಹೇಳುವುದಕ್ಕೂ ಗುಂಡಿಗೆ ಬೇಕು’- HDK ಹೀಗೆ ಟಾಂಗ್​​ ಕೊಟ್ಟಿದ್ದು ಯಾರಿಗೆ?

Source: newsfirstlive.com Source link