ಆಧಿವೇಶನ: ಎತ್ತಿನ ಗಾಡಿಯಲ್ಲೇ ಸದನಕ್ಕೆ ಆಗಮಿಸಲಿರುವ ಕಾಂಗ್ರೆಸ್ ನಾಯಕರು

ಆಧಿವೇಶನ: ಎತ್ತಿನ ಗಾಡಿಯಲ್ಲೇ ಸದನಕ್ಕೆ ಆಗಮಿಸಲಿರುವ ಕಾಂಗ್ರೆಸ್ ನಾಯಕರು

ಇಂದಿನಿಂದ ವಿಧಾನಮಂಡಲ ಅಧಿವೇಶನ ಶುರುವಾಗಲಿದೆ. ಬಿಜೆಪಿಯನ್ನು ಕಟ್ಟಿ ಹಾಕಲು ಕಾಂಗ್ರೆಸ್​ ಸಜ್ಜಾಗಿದೆ. ಹೀಗಾಗಿಯೇ ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡುವ ಮೂಲಕ ಕಾಂಗ್ರೆಸ್​ ರಾಜ್ಯದ ಜನರ ಗಮನ ಸೆಳೆಯಲಿದೆ. ಆದ್ದರಿಂದಲೇ ಕಾಂಗ್ರೆಸ್​​ ನಾಯಕರು ಎತ್ತಿನ ಗಾಡಿಯಲ್ಲೇ ಅಧಿವೇಶನಕ್ಕೆ ಆಗಮಿಸಲಿದ್ದಾರೆ.

ಅಧಿವೇಶನದ ಮೊದಲ ದಿನವೇ ತೈಲ ಬೆಲೆ ಏರಿಕೆ ಅಸ್ತ್ರ ಹಿಡಿಯಲು ಕಾಂಗ್ರೆಸ್​ ನಾಯಕರು ಮುಂದಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​​ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಎತ್ತಿನ ಗಾಡಿಯಲ್ಲೇ ಅಧಿವೇಶನಕ್ಕೆ ಆಗಮಿಸಲಿದ್ದಾರೆ. ಈ ಮೂಲಕ ಕಾಂಗ್ರೆಸ್​ ಬಿಜೆಪಿ ಸರ್ಕಾರದ ವಿರುದ್ಧ ಹಲವು ವಿಚಾರಗಳನ್ನು ಹಿಡಿದುಕೊಂಡು ಕಾಂಗ್ರೆಸ್​ ಹೋರಾಟ ಮಾಡಲಿದೆ.

ಇದನ್ನೂ ಓದಿ: ಇಂದಿನಿಂದ ಅಧಿವೇಶನ; ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ; ಏನೆಲ್ಲಾ ಚರ್ಚೆಯಾಗಲಿದೆ?

Source: newsfirstlive.com Source link