ಇಂದಿನಿಂದ ಅಧಿವೇಶನ ಆರಂಭ; ವಿಧಾನಸೌಧದ ಎರಡು ಕಿ.ಮೀ ಸುತ್ತ ನಿಷೇಧಾಜ್ಞೆ ಜಾರಿ

ಇಂದಿನಿಂದ ಅಧಿವೇಶನ ಆರಂಭ; ವಿಧಾನಸೌಧದ ಎರಡು ಕಿ.ಮೀ ಸುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು: ಇಂದಿನಿಂದ ವಿಧಾನಸಭೆ ಮತ್ತು ವಿಧಾನಪರಿಷತ್ ಅಧಿವೇಶನ ಶುರುವಾಗಲಿದೆ. ಹೀಗಾಗಿ ವಿಧಾನಸೌಧದ ಎರಡು ಕಿ.ಮೀ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಇಂದಿನಿಂದ ಸೆಪ್ಟೆಂಬರ್ 23ರವರೆಗೆ ವಿಧಾನಸೌಧದ ಎರಡು ಕಿ.ಮೀ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಆದೇಶ ಹೊರಡಿಸಿದ್ದಾರೆ.

ಪ್ರತಿದಿನ ಬೆಳಿಗ್ಗೆ 6 ರಿಂದ ರಾತ್ರಿ 12 ಗಂಟೆಯವರೆಗೂ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಅಧಿವೇಶನ ಸಮಯದಲ್ಲಿ ಪ್ರತಿಭಟನೆ, ಮೆರವಣಿಗೆ ಸಾಧ್ಯತೆ ಇದೆ. ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳಿಂದ ಱಲಿಗೆ ಸಿದ್ಧತೆ ನಡೆಸಲಾಗುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧದ ಸುತ್ತಾ ನಿಷೇದಾಜ್ಞೆ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಆಧಿವೇಶನ: ಎತ್ತಿನ ಗಾಡಿಯಲ್ಲೇ ಸದನಕ್ಕೆ ಆಗಮಿಸಲಿರುವ ಕಾಂಗ್ರೆಸ್ ನಾಯಕರು

Source: newsfirstlive.com Source link