ಕೃಷಿ ನೀತಿ ವಿರೋಧಿಸಿ ಪ್ರತಿಭಟನೆ; ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ರೈತರು

ಕೃಷಿ ನೀತಿ ವಿರೋಧಿಸಿ ಪ್ರತಿಭಟನೆ; ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ರೈತರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ನೀತಿಗಳನ್ನು ವಿರೋಧಿಸಿ ಇಂದಿನಿಂದ ರಾಜ್ಯದ ರೈತರು ಬೀದಿಗಿಳಿದು ಪ್ರತಿಭಟಿಸಲಿದ್ದಾರೆ. ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ರೈತರು ವಿಧಾನಸೌಧದ ಹತ್ತ ಱಲಿ ಹೊರಡಲಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​​ ನೇತೃತ್ವದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಬೃಹತ್​​ ಪ್ರತಿಭಟನೆ ನಡೆಯಲಿದೆ. ಱಲಿ ಬಳಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ರೈತರು ನಿರ್ಧರಿಸಿದ್ದಾರೆ.

ಸಿಎಂ ಬಸವರಾಜ್​​ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಮೊದಲ ಅಧಿವೇಶನ ಶುರುವಾಗುತ್ತಿದ್ದಂತೆಯೇ ರೈತರು ಹೋರಾಟಕ್ಕೆ ಮುಂದಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬಂದು ರೈತರು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಇಂದಿನಿಂದ ಅಧಿವೇಶನ ಆರಂಭ; ವಿಧಾನಸೌಧದ ಎರಡು ಕಿ.ಮೀ ಸುತ್ತ ನಿಷೇಧಾಜ್ಞೆ ಜಾರಿ

ಈ ಮಧ್ಯೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಇಂದಿನಿಂದ ಸೆಪ್ಟೆಂಬರ್ 23ರವರೆಗೆ ವಿಧಾನಸೌಧದ ಎರಡು ಕಿ.ಮೀ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಆದೇಶ ಹೊರಡಿಸಿದ್ದಾರೆ. ಅಧಿವೇಶನ ಸಮಯದಲ್ಲಿ ಪ್ರತಿಭಟನೆ, ಮೆರವಣಿಗೆ ಸಾಧ್ಯತೆ ಇದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧದ ಸುತ್ತಾ ನಿಷೇದಾಜ್ಞೆ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Source: newsfirstlive.com Source link