ವಿಧಾನಸೌಧಕ್ಕೆ ಎತ್ತಿನ ಗಾಡಿ ಹೊಡೆದ ಮಾಜಿ ಸಿಎಂ ಸಿದ್ದರಾಮಯ್ಯ

ವಿಧಾನಸೌಧಕ್ಕೆ ಎತ್ತಿನ ಗಾಡಿ ಹೊಡೆದ ಮಾಜಿ ಸಿಎಂ ಸಿದ್ದರಾಮಯ್ಯ

ಪೆಟ್ರೋಲ್​​-ಡೀಸೆಲ್​​​ ಮತ್ತು ಅಡುಗೆ ಅನಿಲದ ದರ ಏರಿಕೆ ಖಂಡಿಸಿ ಕಾಂಗ್ರೆಸ್ ವಿಭಿನ್ನ ರೀತಿಯ ಪ್ರತಿಭಟನೆ ಹಮ್ಮಿಕೊಂಡಿದೆ. ವಿಧಾನಮಂಡಲ ಅಧಿವೇಶನಕ್ಕೆ ಎತ್ತಿನ ಗಾಡಿಯ ಮೂಲಕ ತೆರಳಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಒಂದೆಡೆ ಡಿ.ಕೆ ಶಿವಕುಮಾರ್​​ ತಮ್ಮ ಸದಾಶಿವನಗರ ನಿವಾಸದಿಂದ ಎತ್ತಿನ ಗಾಡಿಯಲ್ಲಿ ಬರುತ್ತಿದ್ದಾರೆ. ಇನ್ನೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಖುದ್ದು ಕುಮಾರ ಪಾರ್ಕ್​​ನಲ್ಲಿರುವ ತಮ್ಮ ನಿವಾಸದಿಂದ ವಿಧಾನಸೌಧದಕ್ಕೆ ಎತ್ತಿನಗಾಡಿ ಹೊಡೆದುಕೊಂಡು ಬರುತ್ತಿದ್ದಾರೆ.

ಇದನ್ನೂ ಓದಿ: ವಿಧಾನಸೌಧಕ್ಕೆ ಎತ್ತಿನ ಗಾಡಿಯಲ್ಲಿ ಹೊರಟ ಡಿ.ಕೆ. ಶಿವಕುಮಾರ್..

Source: newsfirstlive.com Source link