ಕೌಟುಂಬಿಕ ಕಲಹ: ಮನನೊಂದು ಆತ್ಮಹತ್ಯೆ ಮಾಡಿಕೊಂಡ ಗಂಡ, ಹೆಂಡತಿ

ಕೌಟುಂಬಿಕ ಕಲಹ: ಮನನೊಂದು ಆತ್ಮಹತ್ಯೆ ಮಾಡಿಕೊಂಡ ಗಂಡ, ಹೆಂಡತಿ

ಚಿತ್ರದುರ್ಗ: ಕೌಂಟುಬಿಕ ಕಲಹ ಹಿನ್ನೆಲೆ ದಂಪತಿಯೊಂದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಯಾದಲಗಟ್ಟೆ ಗ್ರಾಮದಲ್ಲಿ ದಂಪತಿ ನೇಣಿಗೆ ಶರಣಾಗಿದ್ದಾರೆ.

ಭಾನುವಾರ ರಾತ್ರಿ ಶೀಲಾ (30) ನೇಣಿಗೆ ಶರಣಾಗಿದ್ದರು. ಕೂಡಲೇ ಪತ್ನಿ ಸಾವಿನಿಂದ ನೊಂದ ಪತಿ ಮಹಾಂತೇಶ(35) ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಸಂಬಂಧ ತಳುಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮದುವೆ ಮನೆಯಲ್ಲಿ ಮ್ಯೂಸಿಕ್ ಪ್ಲೇ ಮಾಡಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ ತಾಲಿಬಾನಿಗಳು

Source: newsfirstlive.com Source link