ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ವಿಧಿವಶ

ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ವಿಧಿವಶ

ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಕರ್ ಫರ್ನಾಂಡಿಸ್ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ.

ಆಸ್ಕರ್ ಫರ್ನಾಂಡಿಸ್ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಮನೆಯಲ್ಲಿ ಜಾರಿಬಿದ್ದು ಗಾಯಗೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು.

ಕೇಂದ್ರದ ಮಾಜಿ ಸಚಿವರಾಗಿದ್ದ ಆಸ್ಕರ್‌ ಫರ್ನಾಂಡಿಸ್‌ ಅವರು ಉತ್ತಮ ಯೋಗಪಟುವೂ ಆಗಿದ್ದರು. ಇವರು ಪ್ರತಿನಿತ್ಯ ಯೋಗವನ್ನು ಮಾಡುತ್ತಿದ್ರು. ಇಳಿ ವಯಸ್ಸಿನಲ್ಲಿಯೂ ಕೂಡ ಯೋಗ ತಪ್ಪಿಸುತ್ತಿರಲಿಲ್ಲ. ಆದ್ರೆ ಇತ್ತೀಚೆಗೆ ಮಂಗಳೂರಿನ ತಮ್ಮ ನಿವಾಸದಲ್ಲಿ ಬೆಳಗ್ಗಿನ ಜಾವ ಯೋಗಾಭ್ಯಾಸ ಮಾಡುವಾಗ ಆಯತಪ್ಪಿ ಬಿದ್ದಿದ್ದರು. ಬಿದ್ದ ರಭಸಕ್ಕೆ ತಲೆಗೆ ಪೆಟ್ಟಾಗಿತ್ತು. ಯಾವುದೇ ಗಾಯ ಕಾಣಿಸಿಕೊಂಡಿರಲಿಲ್ಲ. ಬಿದ್ದು ಸ್ವಲ್ಪ ಸಮಯದಲ್ಲಿಯೇ ಚೇತರಿಸಿಕೊಂಡಿದ್ರು. ಆದ್ರೆ, ಅದೇ ದಿನ ಮಂಗಳೂರಿನ ಯೇನೆಪೊಯ ಆಸ್ಪತ್ರೆಗೆ ಡಯಾಲಿಸಿಸ್‌ಗೆ ತೆರಳಿದ್ದರು. ಪರೀಕ್ಷೆ ನಡೆಸಿದ ವೈದ್ಯರು ತಲೆಯಲ್ಲಿ ರಕ್ತ ಹೆಪ್ಪುಗಟ್ಟಿರುವುದನ್ನು ಪತ್ತೆಯಾಗಿತ್ತು ಎನ್ನಲಾಗಿದೆ. ತಕ್ಷಣವೇ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸೇರಿಸಿ ವೈದ್ಯರು ಚಿಕಿತ್ಸೆ ಆರಂಭಿಸಿದ್ರು. ದುರಾದೃಷ್ಟವಶಾತ್‌ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

Source: newsfirstlive.com Source link