ಗುಜರಾತ್​​ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್

ಗುಜರಾತ್​​ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್

ಗಾಂಧಿನಗರ: ಗುಜರಾತ್​​ನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್​ ಪ್ರಮಾಣವಚನ ಸ್ವೀಕರಿಸುವ ಮೂಲಕ ಅಧಿಕಾರ ವಹಿಸಿಕೊಂಡಿದ್ದಾರೆ.

ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮೊನ್ನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದರ ನಂತರ, ಬಿಜೆಪಿ ನಾಯಕರು ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಬಗ್ಗೆ ಸಮಾಲೋಚನೆ ನಡೆಸಿ ಶಾಸಕರ ಸಭೆ ನಡೆಸಿದರು. ಸಭೆಯಲ್ಲಿ ಶಾಸಕರು ಭೂಪೇಂದ್ರ ಪಟೇಲ್ ಅವರನ್ನ ಬಿಜೆಪಿ ಶಾಸಕಾಂಗ ಸಭೆಯ ಅಧ್ಯಕ್ಷರಾಗಿ ಆಯ್ಕೆ ಮಾಡಿದರು. ಈ ಹಿನ್ನೆಲೆ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: #BIGBREAKING ಗುಜರಾತ್ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆ

ಇನ್ನು ಪ್ರಮಾಣವಚನದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ವಿಜಯ್ ರೂಪಾನಿ ಮುಂದಿನ ಗುಜರಾತ್ ಚುನಾವಣೆ ಭೂಪೇಂದ್ರ ಪಟೇಲ್ ಅವರ ನಾಯಕತ್ವದಲ್ಲೇ ನಡೆಯಲಿದೆ. ನಾನು ಪಕ್ಷದ ಸಂಘಟನೆಗಾಗಿ ದುಡಿಯುತ್ತೇನೆ ಎಂದಿದ್ದಾರೆ.

Source: newsfirstlive.com Source link