ವಿರೋಧ ಪಕ್ಷಗಳಿಂದಲೂ ಮೆಚ್ಚುಗೆ ಗಳಿಸಿದ್ದ ಅಜಾತ ಶತ್ರು ಆಸ್ಕರ್​​ ಫರ್ನಾಂಡಿಸ್..!

ವಿರೋಧ ಪಕ್ಷಗಳಿಂದಲೂ ಮೆಚ್ಚುಗೆ ಗಳಿಸಿದ್ದ ಅಜಾತ ಶತ್ರು ಆಸ್ಕರ್​​ ಫರ್ನಾಂಡಿಸ್..!

ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಸಾವನ್ನಪ್ಪಿದ್ದಾರೆ.

ಸುಮಾರು ನಾಲ್ಕು ದಶಕಕ್ಕಿಂತ ಹೆಚ್ಚಿನ ಅವಧಿಯಲ್ಲಿ ರಾಜಕೀಯದಲ್ಲಿ ತೊಡಗಿದ್ದ ಆಸ್ಕರ್‌ ಫರ್ನಾಂಡಿಸ್‌ ಯಾರೊಂದಿಗೂ ವಿರೋಧ ಕಟ್ಟಿಕೊಂಡವರಲ್ಲ. ತುಂಬಾ ಸರಳ ಸಜ್ಜನ ರಾಜಕಾರಣಿ ಎಂದೇ ಗುರುತಿಸಿಕೊಂಡಿದ್ರು. ವಿರೋಧ ಪಕ್ಷಗಳ ಜೊತೆಗೂ ಉತ್ತಮ ಸಂಬಂಧ ಹೊಂದಿದ್ರು. ಇವರು ಮೆಚ್ಚುಗೆಯನ್ನು ಗಳಿಸಿದ್ದರು.

ಸ್ವಪಕ್ಷದವರೇ ಆದ ಜರ್ನಾಧನ ಪೂಜಾರಿ ಮತ್ತು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಜೊತೆ ಸ್ವಲ್ಪ ಮಟ್ಟಿಗೆ ಭಿನ್ನಾಭಿಪ್ರಾಯ ಇತ್ತಂತೆ. ಅದು ದೊಡ್ಡದಾಗಿ ಬಹಿರಂಗವಾಗಿ ಸ್ಫೋಟಗೊಳ್ಳದಂತೆ ನೋಡಿಕೊಂಡಿದ್ದಾರೆ ಎನ್ನಲಾಗಿದೆ.

ಆಸ್ಕರ್‌ ಫರ್ನಾಂಡಿಸ್‌ ಅಂದ್ರೆ ಸರಳ ಸಜ್ಜನಿಕೆಗೆ ಖ್ಯಾತರಾದವರು. ಲೋಕಸಭಾ, ರಾಜ್ಯಸಭಾ ಸದಸ್ಯರಾಗಿ, ಕೇಂದ್ರ ಸಚಿವರಾಗಿ ಉತ್ತಮ ಕಾರ್ಯನಿರ್ವಹಿಸಿದ್ದಾರೆ. ರಾಜ್ಯದ ಅಭಿವೃದ್ಧಿಗೆ ತಮ್ಮದೇ ಆದಂತಹ ಕೊಡುಗೆ ನೀಡಿದ್ದಾರೆ. ಇವರ ನಿಧನ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ.

ಇದನ್ನೂ ಓದಿ: ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ವಿಧಿವಶ

Source: newsfirstlive.com Source link