ಮೌಲ್ಯ ಮಾಪನ ತಡ: ಆಕ್ರೋಶಗೊಂಡ ವಿದ್ಯಾರ್ಥಿಗಳಿಂದ ವಿವಿ ಆಡಳಿತ ಕಚೇರಿಗೆ ಮುತ್ತಿಗೆ ಯತ್ನ

ಮೌಲ್ಯ ಮಾಪನ ತಡ: ಆಕ್ರೋಶಗೊಂಡ ವಿದ್ಯಾರ್ಥಿಗಳಿಂದ ವಿವಿ ಆಡಳಿತ ಕಚೇರಿಗೆ ಮುತ್ತಿಗೆ ಯತ್ನ

ದಕ್ಷಣ ಕನ್ನಡ: ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯ ಮೌಲ್ಯಮಾಪನವನ್ನು ತಡ ಮಾಡುತ್ತಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಕೊಣಾಜೆಯ ಮಂಗಳೂರು ವಿಶ್ವ ವಿದ್ಯಾಲಯದ ಆಡಳಿತ ಕಚೇರಿ ಮುತ್ತಿಗೆಗೆ ಯತ್ನಿಸಿದ್ದಾರೆ.

ಎವಿವಿಪಿ‌ ವಿದ್ಯಾರ್ಥಿ ಸಂಘಟನೆಯಿಂದ ಮುತ್ತಿಗೆ ಯತ್ನ ನಡೆಸಲಾಗಿದೆ ಎಂದು ತಿಳಿದಿದ್ದು, ಯುನಿವರ್ಸಿಟಿಯ ಸಿಂಡಿಕೇಟ್ ಸಭೆ ನಡೆಯುತ್ತಿದ್ದಾಗ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು‌ ಪೊಲೀಸರು ಬಾಗಿಲಲ್ಲೇ ತಡೆದಿದ್ದು, ಪೋಲಿಸರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ.

Source: newsfirstlive.com Source link