ನಿಖಿಲ್ ಪತ್ನಿ ರೇವತಿ ಸೀಮಂತ- ಗಣ್ಯರಿಂದ ಶುಭ ಹಾರೈಕೆ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ನಿಖಿಲ್ ಕುಮಾರಸ್ವಾಮಿ ಅವರ ಪತ್ನಿ ರೇವತಿ ಸೀಮಂತ ಕಾರ್ಯಕ್ರಮದಲ್ಲಿ ಗಣ್ಯರು ಭಾಗಿಯಾಗಿದ್ದರು.

ನಾಯಕ ನಟ ನಿಖಿಲ್ ಕುಮಾರಸ್ವಾಮಿ ಅವರ ಧರ್ಮಪತ್ನಿ ರೇವತಿ ಅವರ ಸೀಮಂತ ಕಾರ್ಯಕ್ರಮದಲ್ಲಿ ನಿರ್ಮಾಪಕರಾದ ಮುನಿರತ್ನ ಅವರು ಪಾಲ್ಗೊಂಡು ಶುಭ ಕೋರಿದರು. ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಸೀಮಂತ ಸಮಾರಂಭ ಇಂದು ನೇರವೇರಿತು. ಅನೇಕ ಗಣ್ಯರು ಸೀಮಂತ ಸಂಭ್ರಮದಲ್ಲಿರುವ ರೇವತಿಗೆ ಶುಭ ಹಾರೈಸಿದ್ದಾರೆ. ಇದನ್ನೂ ಓದಿ:  20 ಕೆಜಿ ಭಾರದ ಲಂಬಾಣಿ ಉಡುಗೆ ತೊಟ್ಟ ಶುಭಾ ಪೂಂಜಾ

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರ ಪ್ರೀತಿಯ ಪುತ್ರ ನಿಖಿಲ್ ಕುಮಾರ್ ಸ್ವಾಮಿ ಪತ್ನಿ ರೇವತಿಗೆ ಇದೀಗ ಎಂಟು ತಿಂಗಳು ತುಂಬಿದ್ದು, ನಗರದ ಹೆಚ್‍ಎಸ್‍ಆರ್ ಲೇಔಟ್‍ನ ಮಾನ್ವಿ ಕನ್ವೆನ್ಷನ್ ಹಾಲ್‍ನಲ್ಲಿ ಸೀಮಂತ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕೊರೊನಾ ಕಾರಣದಿಂದಾಗಿ ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರು, ಕುಟುಂಬಸ್ಥರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಇದನ್ನೂ ಓದಿ: ಗೌಡ್ರ ಕುಟುಂಬದಲ್ಲಿ ಹಬ್ಬದ ಸಂಭ್ರಮ – ನಿಖಿಲ್ ಪತ್ನಿಗೆ ಸೀಮಂತ

nikhil kumaraswamy Wife revathi baby shower ceremony Bengaluru

2020ರ ಏಪ್ರಿಲ್ 17ರಂದು ಲಾಕ್‍ಡೌನ್ ಸಮಯದಲ್ಲಿ ನಿಖಿಲ್ ಹಾಗೂ ರೇವತಿ ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿರುವ ಫಾರ್ಮ್ ಹೌಸ್‍ನಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕೆಲವು ತಿಂಗಳ ಹಿಂದಷ್ಟೇ ಮಾಜಿ ಸಿಎಂ. ಹೆಚ್.ಡಿ ಕುಮಾರಸ್ವಾಮಿಯವರು ತಾವು ತಾತಾ ಆಗುತ್ತಿರುವ ಖುಷಿ ವಿಚಾರವನ್ನು ಮಾಧ್ಯಮದ ಮುಂದೆ ಹಂಚಿಕೊಂಡಿದ್ದರು. ಇದೀಗ ಮುದ್ದಿನ ಸೊಸೆ ಸೀಮಂತವನ್ನು ಅದ್ದೂರಿಯಾಗಿ ಆಚರಿಸಿದ್ದು, ಗೌಡರ ಕುಟುಂಬದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇದನ್ನೂ ಓದಿ: ನಾಮಧಾರಿಯಾದ ಡಿಂಪಲ್ ಕ್ವೀನ್ ರಚಿತಾ ರಾಮ್

nikhil kumaraswamy Wife revathi baby shower ceremony Bengaluru

ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಬ್ಯುಸಿ ಆಗಿರುವ ನಿಖಿಲ್ ಅವರು ಕುಟುಂಬದ ಕಡೆಗೂ ಹೆಚ್ಚು ಗಮನ ನೀಡುತ್ತಾರೆ. ಪತ್ನಿ ಜೊತೆ ಇರುವ ಫೋಟೋಗಳನ್ನು ಅವರು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಇತ್ತೀಚೆಗೆ ಅವರ ಮನೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಆ ಸಂದರ್ಭದ ಫೋಟೋವನ್ನು ಹಂಚಿಕೊಂಡ ನಿಖಿಲ್, ತಮ್ಮ ಅಭಿಮಾನಿಗಳಿಗೆ ವಿಶ್ ಮಾಡಿದ್ದರು. ಮೊದಲ ಮಗುವಿನ ನಿರೀಕ್ಷೆಯಲ್ಲಿ ಇರುವ ನಿಖಿಲ್ ಮತ್ತು ರೇವತಿ ದಂಪತಿಗೆ ಎಲ್ಲರಿಂದ ಶುಭ ಹಾರೈಕೆಗಳು ಕೇಳಿಬರುತ್ತಿವೆ.

Source: publictv.in Source link