ಸೋದೆ ಮಠಕ್ಕೆ ಅಪ್ರಾಪ್ತ ಪೀಠಾಧಿಪತಿ; ಇದು ಗಂಭೀರ ವಿಚಾರವೆಂದ ಹೈಕೋರ್ಟ್

ಸೋದೆ ಮಠಕ್ಕೆ ಅಪ್ರಾಪ್ತ ಪೀಠಾಧಿಪತಿ; ಇದು ಗಂಭೀರ ವಿಚಾರವೆಂದ ಹೈಕೋರ್ಟ್

ಬೆಂಗಳೂರು: ಶಿರೂರು ಮಠಕ್ಕೆ ಅಪ್ರಾಪ್ತ ಬಾಲಕ ಪೀಠಾಧಿಪತಿ ನೇಮಕ ವಿವಾದಕ್ಕೆ ಸಂಬಂಧಿಸಿದಂತೆ ಕೇಸ್​​ಗೆ ಹೈಕೋರ್ಟ್ ಅಮಿಕಸ್ ಕ್ಯೂರಿಯ ನೇಮಕ ಮಾಡಿದೆ. ಹಿರಿಯ ನ್ಯಾಯವಾದಿ ಎಸ್.ಎಸ್. ನಾಗಾನಂದ್ ಅಮಿಕಸ್ ಕ್ಯೂರಿಯಾಗಿ ನೇಮಕಗೊಂಡಿದ್ದಾರೆ. ಹಂಗಾಮಿ ಸಿಜೆ ಸತೀಶ್ ಚಂದ್ರ ಶರ್ಮ & ನ್ಯಾ. ಸಚಿನ್ ಶಂಕರ್ ಮಗದಂ ನೇತೃತ್ವದ ವಿಭಾಗೀಯ ಪೀಠ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲೆಯಲ್ಲಿರುವ ಪ್ರಸಿದ್ಧ ಶಿರೂರು ಮಠಕ್ಕೆ ಇತ್ತೀಚೆಗೆ ಪೀಠಾಧಿಪತಿಯಾಗಿ ಅಪ್ರಾಪ್ತ ಬಾಲಕನನ್ನ ನೇಮಕ ಮಾಡಲಾಗಿದೆ. ಈ ಕೇಸ್​​ಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಸಹಕರಿಸಲು ಅಮಿಕಸ್ ಕ್ಯೂರಿ ನೇಮಕ ಮಾಡಲಾಗಿದೆ. ಅವರಿಗೆ ಅರ್ಜಿಯ ಪ್ರತಿ ಹಾಗೂ ಇತರೆ ಎಲ್ಲ ದಾಖಲೆಗಳನ್ನು ಒದಗಿಸುವಂತೆ ಅರ್ಜಿದಾರರಿಗೆ ಹೈಕೋರ್ಟ್ ನ್ಯಾಯಾಪೀಠ ಸೂಚನೆ ನೀಡಿದೆ.

ಇದನ್ನೂ ಓದಿ: ಶಿರೂರು ಮಠಕ್ಕೆ ಉತ್ತರಾಧಿಕಾರಿಯಾಗಿ ಅನಿರುದ್ಧ ಸರಳತ್ತಾಯ ಘೋಷಣೆ

ಶಿರೂರು ಮಠ ಭಕ್ತ ಸಮಿತಿ ಕಾರ್ಯದರ್ಶಿ ಪಿ.ಲತವ್ಯ ಆಚಾರ್ಯ ಮತ್ತಿತರಎ ಪಿಐಎಲ್ ಇದಾಗಿದ್ದು ಮೊದಲು ಸೋದೆ ವಾದಿರಾಜ ಮಠದ ಪರ ವಕೀಲರಿಂದ ವಾದ ಮಂಡನೆ ಮಾಡಿದ್ರು. ಮಠಕ್ಕೆ ಬಹು ದೊಡ್ಡ ಪರಂಪರೆಯೇ ಇದೆ. ಉಡುಪಿ ಅಷ್ಟಮಠಗಳಲ್ಲಿ ಬಾಲಸನ್ಯಾಸಿನ್ನ ಮಠ ಪೀಠಾಧಿಪತಿ ಮಾಡುವ ಪರಂಪರೆ ಇದೆ. ಈ ಸಂಪ್ರದಾಯ ತಲೆಮಾರುಗಳಿಂದಲೂ ನಡೆದುಕೊಂಡು ಬಂದಿದೆ. ಬಾಲಸನ್ಯಾಸಿಗೆ ದೀಕ್ಷೆ ಕೊಡಿಸಿ ಧರ್ಮಶಾಸ್ತ್ರ, ವೇದ, ಉಪನಿಷತ್ ಬೋಧಿಸಲಾಗುತ್ತೆ. ನಂತರ ಅವರನ್ನು ಪೀಠಾಧಿಪತಿಗಳನ್ನಾಗಿ ಮಾಡಲಾಗುವುದು. ಇದನ್ನು ಬಲವಂತವಾಗಿ ಹೇರುವುದಿಲ್ಲ, ಈ ಪ್ರಕ್ರಿಯೆಯಲ್ಲಿ ಯಾವುದೇ ಲೋಪವಾಗಿಲ್ಲ. ಕಾನೂನಿನಲ್ಲಿ ಬಾಲ ಸನ್ಯಾಸಿ ಪೀಠಾಧಿಪತಿ ಆಗುವುದನ್ನ ತಡೆಯಲು ಯಾವುದೇ ನಿರ್ಬಂಧವಿಲ್ಲ. ಅಲ್ಲದೆ, ಶಂಕಾರಾಚಾರ್ಯರು 12ನೇ ವಯಸ್ಸಿನಲ್ಲಿ, ಮಧ್ವಾಚಾರ್ಯರು 10ನೇ ವಯಸ್ಸಿನಲ್ಲಿ ಸನ್ಯಾಸ ಸ್ವೀಕರಿಸಿ ಪೀಠಾಧಿಪತಿಯಾಗಿದ್ರು. ಅದರಂತೆ ಈಗಲೂ ಸಹ ಮಧ್ವ ಪರಂಪರೆಯಂತೆ ಮಾಡಲಾಗ್ತಿದೆ. ಬಾಲ ಸನ್ಯಾಸಿಯನ್ನು ಪೀಠಾಧಪತಿಯನ್ನಾಗಿ ನೇಮಿಸಲಾಗಿದೆ ಎಂದರು.

ಇದನ್ನೂ ಓದಿ: ಅಪ್ರಾಪ್ತ ಬಾಲಕ ಪೀಠಾಧಿಪತಿಯಾಗಿ ನೇಮಕ ಪ್ರಶ್ನಿಸಿ PIL : ವಿಚಾರಣೆ ನಡೆಸಿದ ಹೈಕೋರ್ಟ್

ಇದಕ್ಕೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ.. ಇದರಲ್ಲಿ ಮಕ್ಕಳ ಹಕ್ಕು ಸೇರಿದಂತೆ ಹಲವು ಅಂಶಗಳಿವೆ. ಸುಪ್ರೀಂಕೋರ್ಟ್ ನ ತೀರ್ಪುಗಳೂ ಸಹ ಇವೆ. ಹಾಗಾಗಿ ನ್ಯಾಯಾಲಯ ಅವುಗಳನ್ನು ಪರಿಶೀಲಿಸಿ ವಿಷಯ ತೀರ್ಮಾನಿಸಬೇಕಿದೆ ಎಂದು ಕೋರ್ಟ್​ಗೆ ಮನವಿ ಮಾಡಿದರು.

ಅರ್ಜಿದಾರ ಹಾಗೂ ಮಠದ ಪರ ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ.. ಇದು ಗಂಭೀರ ವಿಚಾರವಾಗಿದೆ. ಬಾಲ ಸನ್ಯಾಸಿ ಮಠಾಧಿಪತಿ ಆಗುವುದನ್ನ ನಿರ್ಬಂಧಿಸುವ ಯಾವುದಾದರೂ ಕಾನೂನು ಇದೆಯೇ? ಈ ವಿಚಾರದಲ್ಲಿ ಶಾಸನಗಳು ಏನು ಹೇಳುತ್ತವೆ.? ಎಂದು ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ಪ್ರಶ್ನೆ ಮಾಡಿದೆ.

ಇದನ್ನೂ ಓದಿ: ಸನ್ಯಾಸ ದೀಕ್ಷೆ ಸ್ವೀಕರಿಸಿದ ಶಿರೂರು ಮಠದ ನೂತನ ಉತ್ತರಾಧಿಕಾರಿ ಅನಿರುದ್ಧ

ಅಲ್ಲದೇ ಶಂಕರಾಚಾರ್ಯರು ಸೇರಿದಂತೆ ಬಹುತೇಕ ಆಚಾರ್ಯರು ಚಿಕ್ಕವಯಸ್ಸಿನಲ್ಲಿಯೇ ಪೀಠಾಧಿಪತಿಗಳಾಗಿದ್ದಾರೆ. ಬೌದ್ಧಧರ್ಮಗಳಲ್ಲೂ ಬಾಲ ಸನ್ಯಾಸಿಗಳನ್ನು ಬಿಕ್ಕುಗಳನ್ನು ಮಾಡುತ್ತಾರೆ. ಇದಕ್ಕೆ ನಿರ್ಬಂಧಿಸಲು ಕಾನೂನಿನಲ್ಲಿ ಅವಕಾಶವಿದೆಯೇ.? ನೀವು ಸಿವಿಲ್ ದಾವೆ ಹೂಡಬಹುದಲ್ಲವೇ. ಎಂದು ಅರ್ಜಿದಾರ ಪರ ವಕೀಲರಿಗೆ ಹೈಕೋರ್ಟ್ ಪೀಠ ಪ್ರಶ್ನೆ ಮಾಡಿದ್ದು ಅರ್ಜಿ ಕುರಿತಂತೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಬಳಿಕ ಅಂತಿಮ ವಿಚಾರಣೆಗೆ ಸೆ. 23ಕ್ಕೆ ನಿಗದಿಪಡಿಸಿದ ಪೀಠ.. ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಿಕೆ

ಪ್ರಕರಣದ ಹಿನ್ನಲೆ:
ಇತ್ತೀಚೆಗೆ ಶಿರೂರು ಮಠಕ್ಕೆ 16 ವರ್ಷದ ಬಾಲಕನನ್ನು ಪೀಠಾಧಿಪತಿಯನ್ನಾಗಿ ನೇಮಿಸಲಾಗಿದೆ. ಇದನ್ನ ಪ್ರಶ್ನಿಸಿ ಪಿಐಎಲ್ ಸಲ್ಲಿಕೆಯಾಗಿತ್ತು. 18 ವರ್ಷ ತುಂಬದವರು ನೀಡುವ ಸಮ್ಮತಿಗೂ ಮಾನ್ಯತೆ ಇಲ್ಲ, ಅಪ್ರಾಪ್ತರ ಹಕ್ಕು ಉಲ್ಲಂಘನೆಯಾಗಿದೆ. ಶಿರೂರು ಮಠದ ಆಡಳಿತಾತ್ಮಕ, ಆರ್ಥಿಕ, ಆಧ್ಯಾತ್ಮಿಕ ಹಾಗೂ ಧಾರ್ಮಿಕ ವಿಚಾರಗಳ ಸಂಬಂಧ ಯಾವುದೇ ರೀತಿಯ ನಿಯಂತ್ರಣ ಸಾಧಿಸಲು ಸೋದೆ ಮಠಕ್ಕೆ ಅವಕಾಶವಿಲ್ಲ. ಆದರೂ ಪೀಠಾಧಿಪತಿ ನೇಮಕ ವಿಚಾರದಲ್ಲಿ ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಮಧ್ಯಪ್ರವೇಶಿಸಿರುವುದು ಕಾನೂನು ಬಾಹಿರ ಕ್ರಮವಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

Source: newsfirstlive.com Source link