ಹಾಡಹಗಲೇ ಯುವತಿಯ ಖಾಸಗಿ ಭಾಗಗಳನ್ನು ಮುಟ್ಟಿ ಲೈಂಗಿಕ ಕಿರುಕುಳ

ಹಾಡಹಗಲೇ ಯುವತಿಯ ಖಾಸಗಿ ಭಾಗಗಳನ್ನು ಮುಟ್ಟಿ ಲೈಂಗಿಕ ಕಿರುಕುಳ

ಬೆಂಗಳೂರು: ಕಿಡಿಗೇಡಿಯೋರ್ವ ಯುವತಿಯ ಖಾಸಗಿ ಭಾಗಗಳನ್ನ ಮುಟ್ಟಿ ಅಸಭ್ಯವಾಗಿ ವರ್ತಿಸಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಲ್ಯಾಂಗ್ ಫೋರ್ಡ್ ರಸ್ತೆಯಲ್ಲಿ ಹಾಡಹಗಲೇ ನಡೆದುಕೊಂಡು ಹೋಗುವಾಗ ಯುವತಿಯ ಅಂಗಾಗ ಮುಟ್ಟಿ ಹಲ್ಲೆ ನಡೆಸಲಾಗಿದೆ.

ಯುವತಿ ಜಯನಗರ ಕಂಪನಿಯೊಂದರ ಉದ್ಯೋಗಿ. ಆಕೆಯನ್ನು ಹಿಂಬಾಲಿಸಿದ ಆರೋಪಿ ತಬ್ಬಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಘಟನೆ ಸಂಬಂಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಬಟ್ಟೆ ಬದಲಿಸುವ ವಿಡಿಯೋ ಮಾಡಿ ಅಪ್ರಾಪ್ತೆ ಮೇಲೆ ಅತ್ಯಚಾರ ಎಸಗಿದ ಆರೋಪ; ಇಬ್ಬರು ಅರೆಸ್ಟ್​

Source: newsfirstlive.com Source link