ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್‍ನಿಂದ ಜಿಲ್ಲಾಧಿಕಾರಿಗಳಿಗೆ ದೂರು

ಮೈಸೂರು: ರಾಜಕೀಯ ಲಾಭಕ್ಕಾಗಿ ಸಂಸದ ಪ್ರತಾಪ್ ಸಿಂಹ ಕೋಮು ಗಲಾಭೆ ಸೃಷ್ಟಿಸಲು ಹುನ್ನಾರ ರೂಪಿಸಿದ್ದಾರೆ ಎಂದು ಆರೋಪಿಸಿ ಮೈಸೂರು ಕಾಂಗ್ರೆಸ್ ನಿಯೋಗ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದೆ.

ಮುಸ್ಲಿಂರ ದರ್ಗಾ ಹೊಡೆಯಲು ನಿಮಗೆ ತೊಡೆ ನಡುಗುತ್ತಾ ಎಂದು ಪ್ರತಾಪ್ ಸಿಂಹ ಹೇಳಿಕೆ ಸರಿಯಲ್ಲ. ಕೆಡಿಪಿ ಸಭೆಯಲ್ಲಿ ಸಂಸದರು ಜಿಲ್ಲಾಧಿಕಾರಿಗಳಿಗೆ ಧಮ್ಕಿ ಹಾಕಿರುವುದು ಅಕ್ಷಮ್ಯ ಅಪರಾಧ. ರಾಜಕೀಯ ಲಾಭಕ್ಕಾಗಿ ರಾತ್ರೋ ರಾತ್ರಿ ದೇವಸ್ಥಾನಗಳನ್ನು ಹೊಡೆದು ಹಾಕಿ ಕೋಮು ಗಲಾಭೆ ಸೃಷ್ಟಿಸಲು ಮುಂದಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿ ಮೈಸೂರು ಜಿಲ್ಲಾಧಿಕಾರಿಗಳಿಗೆ ನೀಡಿದೆ. ಇದನ್ನೂ ಓದಿ: ಮೈಸೂರಿನಲ್ಲಿ ದೇವಸ್ಥಾನ ತೆರವು ಕಾರ್ಯಚರಣೆಗೆ ಜಿಲ್ಲಾಡಳಿತ ಬ್ರೇಕ್

ಅರಸು ರಸ್ತೆಯ ದರ್ಗಾ, ಇರ್ವೀನ್ ರಸ್ತೆಯಲ್ಲಿರುವ ಮಸೀದಿ, ಎರಡು ವಿಚಾರ ಈಗ ಕೋರ್ಟ್ ನಲ್ಲಿದೆ. ಆದರೂ ಪದೇ ಪದೇ ಇದನ್ನು ಕೆಡವಿ ಎಂದು ಕೆಡಿಪಿ ಸಭೆಯಲ್ಲಿ ಸಂಸದರು ಆಗ್ರಹಿಸಿದ್ದಾರೆ. ಇದರ ಹಿಂದೆ ರಾಜಕೀಯ ಲಾಭದ ಹುನ್ನಾರವಿದೆ ಎಂದು ಆರೋಪಿಸಿದೆ. ಇದನ್ನೂ ಓದಿ: ದೇಶ-ಧರ್ಮದ ವಿಚಾರದಲ್ಲಿ ನಾನು ಸದಾ ಧ್ವನಿ ಎತ್ತುತ್ತೇನೆ: ಪ್ರತಾಪ್ ಸಿಂಹ

Source: publictv.in Source link