ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮುಖಕ್ಕೆ ಮಸಿ ಬಳಿದ ಕರ್ನಾಟಕ ರಕ್ಷಣಾ ವೇದಿಕೆ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮುಖಕ್ಕೆ ಮಸಿ ಬಳಿದ ಕರ್ನಾಟಕ ರಕ್ಷಣಾ ವೇದಿಕೆ

ಧಾರವಾಡ: ಹಿಂದಿ ದಿವಸ್ ಆಚರಣೆ ಹಿನ್ನೆಲೆ ಆಚರಣೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಭಾವಚಿತ್ರವಿದ್ದ ಬ್ಯಾನರ್​ಗೆ ಕರವೇ ಕಾರ್ಯಕರ್ತರು ಮಸಿ ಬಳಿದಿದ್ದಾರೆ.

 

ಹಿಂದಿ ಪ್ರಚಾರ ಸಭಾ ಸಂಸ್ಥೆ ನಗರದಲ್ಲಿ ಸಚಿವರ ಭಾವಚಿತ್ರದ ಬ್ಯಾನರ್ ಹಾಕಿತ್ತು. ಹಿಂದಿ ದಿವಸ್ ವಿರೋಧಿಸಿ ಪ್ರತಿಭಟಿಸಿದ ಕರವೇ ಕಾರ್ಯಕರ್ತರು ಧಾರವಾಡ ಹಿಂದಿ‌ ಪ್ರಚಾರ ಸಭಾ ಎದುರಿನ ಬ್ಯಾನರ್ ಗೆ ಕಪ್ಪು ಮಸಿ ಬಳಿದಿದ್ದಾರೆ. ಕರವೇ ಶಿವರಾಮೇಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

Source: newsfirstlive.com Source link