ನೂತನ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ವಿಧಾನಸೌಧ ಚಲೋ: ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ವಿಧಾನಸೌಧ ಚಲೋ: ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ರಾಜ್ಯಾದ್ಯಂತ ವಿವಿಧ ಕಾಲೇಜುಗಳಿಂದ ಬೆಂಗಳೂರಿಗೆ ಆಗಮಿಸಿದ್ದ ವಿದ್ಯಾರ್ಥಿಗಳು ವಿಧಾನಸೌಧ ಚಲೋ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

ಕಾಲೇಜು ಖಾಸಗೀಕರಣದಿಂದ ವಿದ್ಯಾರ್ಥಿಗಳಿಗೆ ಭಾರೀ ಸಮಸ್ಯೆಯಾಗಲಿದೆ ಎಂದು ಪ್ರತಿಭಟಿಸಿ ಮೈಸೂರು ಬ್ಯಾಂಕ್ ಸರ್ಕಲ್‌ನಿಂದ ವಿದ್ಯಾರ್ಥಿಗಳು ಜಾಥಾ ಹೊರಟಿದ್ದರು. ಈ ವೇಳೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಿದ ಘಟನೆ ನಡೆದಿದೆ.

ಇದನ್ನೂ ಓದಿ: ಇಂದಿನಿಂದ ಅಧಿವೇಶನ ಆರಂಭ; ವಿಧಾನಸೌಧದ ಎರಡು ಕಿ.ಮೀ ಸುತ್ತ ನಿಷೇಧಾಜ್ಞೆ ಜಾರಿ

ಶಿಕ್ಷಣ ಇಲಾಖೆ ಎಲ್ಲಾ ಕಾಲೇಜುಗಳನ್ನು ಅಟೊನಮಸ್ ಮಾಡಿ ಖಾಸಗೀಕರಣಕ್ಕೆ ಮುಂದಾಗಿದೆ. ಹೊಸ ಶಿಕ್ಷಣ ನೀತಿಯಲ್ಲಿ ಆನ್ ಲೈನ್ 40% ಆಫ್ ಲೈನ್ 60% ಮಾಡಲು ನಿರ್ಧಾರ ಮಾಡಲಾಗಿದೆ. ಅಂಗನವಾಡಿ ಶಿಕ್ಷಣಕ್ಕೆ ಪೂರ್ತಿ ಕಡಿವಾಣ ಹಾಕಲು ನಿರ್ಧರಿಸಿದೆ. ಹೀಗಾಗಿ ಶಿಕ್ಷಣ ನೀತಿಯನ್ನು ಬುಡಮೇಲು ಮಾಡುವ ನಿರ್ಧಾರವನ್ನು ಕೈ ಬಿಡಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಸದ್ಯ ಪ್ರತಿಭಟನೆ ಹಿನ್ನಲೆ ಮುನ್ನೂರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಸ್ಥಳದಲ್ಲಿ ಡಿಸಿಪಿ ಅನುಚೇತ್ ಮೊಕ್ಕಾಂ ಹೂಡಿದ್ದಾರೆ.

Source: newsfirstlive.com Source link