ಖ್ಯಾತ ಸಾಹಿತಿ ಡಾ. ಸಂಗಮೇಶ ಹಂಡಿಗಿ ವಿಧಿವಶ

ಖ್ಯಾತ ಸಾಹಿತಿ ಡಾ. ಸಂಗಮೇಶ ಹಂಡಿಗಿ ವಿಧಿವಶ

ಧಾರವಾಡ: ವಿಮರ್ಶಾತ್ಮಕ ಬರಹ, ವಚನ, ಕಾವ್ಯದ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ಪ್ರಖ್ಯಾತರಾಗಿದ್ದ ಹಿರಿಯ ಸಾಹಿತಿ ಡಾ. ಸಂಗಮೇಶ ಹಂಡಿಗಿ (84) ವಿಧಿವಶರಾಗಿದ್ದಾರೆ.

ಮೂಲತಃ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ತೆಲಗಿಯವರಾದ ಹಂಡಗಿಯವರು ಕನ್ನಡ ಸಾಹಿತ್ಯ ಲೋಕಕ್ಕೆ 46 ಗ್ರಂಥಗಳ ಕಾಣಿಕೆ ನೀಡಿದ್ದಾರೆ. 84 ವರ್ಷದ ಡಾ. ಹಂಡಿಗಿಯವರು ಇಂದು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವನ್ನ ಅಗಲಿದ್ದಾರೆ. ಸಂಜೆ 4 ಗಂಟೆಗೆ ವಿದ್ಯಾನಗರದ ರುದ್ರಭೂಮಿಯಲ್ಲಿ ಮೃತರ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Source: newsfirstlive.com Source link