ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ- 559 ಮಂದಿಗೆ ಕೊರೊನಾ, 12 ಸಾವು

– ಪಾಸಿಟಿವಿಟಿ ರೇಟ್ ಶೇ.0.52ಕ್ಕೆ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕೇಸ್ ಗಳ ಸಂಖ್ಯೆಯಲ್ಲಿ ಸಂಪೂರ್ಣ ಇಳಿಕೆಯಾಗಿದೆ. ಇಂದು ಒಂದು ಸಾವಿರದ ಒಳಗಡೆ ಕೇಸ್ ಗಳು ದಾಖಲಾಗಿವೆ. ರಾಜ್ಯದಲ್ಲಿ ಇಂದು 559 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 12 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಇನ್ನೂ ಪಾಸಿಟಿವಿಟಿ ರೇಟ್ ಶೇ. 0.52ಗೆ ಇಳಿಕೆಯಾಗಿದೆ. 100 ಜನರಿಗೆ ಟೆಸ್ಟ್ ಮಾಡಿದರೆ ಒಬ್ಬರಿಗೆ ಪಾಸಿಟಿವ್ ಆಗ್ತಿದೆ.

ಬೆಂಗಳೂರಿನಲ್ಲಿ ಕೂಡ ಇಂದು 231 ಕೇಸ್ ದಾಖಲಾಗಿದ್ದು, ಬೆಂಗಳೂರಿನಲ್ಲಿ ಕೊರೊನಾಗೆ 04 ಸಾವನ್ನಪ್ಪಿದ್ದಾರೆ. ಬಹಳ ದಿನಗಳ ನಂತರ ಬೆಂಗಳೂರಿನಲ್ಲಿ ಸ್ವಲ್ಪ ಮಟ್ಟಿಗೆ ಡೆತ್ ಕಂಟ್ರೋಲ್ ಗೆ ಬಂದಿದೆ. ಜೊತೆಗೆ ರಾಜ್ಯದಲ್ಲಿ ಇಂದು 1034 ಜನ ಡಿಸ್ಚಾರ್ಜ್ ಆಗಿದ್ದು ಬೆಂಗಳೂರಿನಲ್ಲಿ 302 ಮಂದಿ ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇನ್ನೂ ಇಂದು ರಾಜ್ಯದಲ್ಲಿ ಆ್ಯಕ್ಟೀವ್ ಕೇಸ್ ಗಳ ಸಂಖ್ಯೆ 15,754ಕ್ಕೆ ಏರಿಕೆಯಾಗಿದೆ. ಜೊತೆಗೆ ಇಂದು ಕೋವಿಡ್ ಟೆಸ್ಟ್ ಕೂಡ ಒಂದು ಲಕ್ಷಕ್ಕೂ ಹೆಚ್ಚು ಕೋವಿಡ್ ಟೆಸ್ಟ್ ಆಗಿದೆ. 1,05,645 ಕೋವಿಡ್ ಟೆಸ್ಟ್ ಆಗಿದ್ದು 559 ಪಾಸಿಟಿವ್ ಆಗಿರೋದು ಕೊರೊನಾ ಕಂಟ್ರೋಲ್ ನಲ್ಲಿ ಇರೋದು ಗೊತ್ತಾಗ್ತಿದೆ. ಇದನ್ನೂ ಓದಿ: ಕೊಡಗಿನಲ್ಲಿ ಕೋವಿಡ್ ಡೆಲ್ಟಾ ವೇರಿಯಂಟ್ ತಳಿ ಪತ್ತೆ- ಜನರಲ್ಲಿ ಮತ್ತೆ ಆತಂಕ

blank

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 11, ಬೆಂಗಳೂರು ಗ್ರಾಮಾಂತರ 8, ಬೆಂಗಳೂರು ನಗರ 231, ಬೀದರ್ 1, ಚಾಮರಾಜನಗರ 3, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 8, ಚಿತ್ರದುರ್ಗ 2, ದಕ್ಷಿಣ ಕನ್ನಡ 87, ದಾವಣಗೆರೆ 9, ಧಾರವಾಡ 1, ಗದಗ 0, ಹಾಸನ 10, ಹಾವೇರಿ 1, ಕಲಬುರಗಿ 3, ಕೊಡಗು 23, ಕೋಲಾರ 9, ಕೊಪ್ಪಳ 1, ಮಂಡ್ಯ 10, ಮೈಸೂರು 28, ರಾಯಚೂರು 1, ರಾಮನಗರ 0, ಶಿವಮೊಗ್ಗ 8, ತುಮಕೂರು 24, ಉಡುಪಿ 57, ಉತ್ತರ ಕನ್ನಡ 18, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

Source: publictv.in Source link