ಎಲೆಕ್ಟ್ರಾನಿಕ್ಸ್ ಸಿಟಿ ಪ್ಲೈ ಓವರ್ ಮೇಲೆ ಭೀಕರ ಅಪಘಾತ

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಫ್ಲೈಓವರ್ ಮೇಲಿನಿಂದ ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ.

ಅಪಘಾತದ ರಭಸಕ್ಕೆ ಫ್ಲೈಓವರ್ ಮೇಲಿಂದ ಬಿದ್ದು ಯುವಕ-ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓವರ್ ಟೇಕ್ ಮಾಡುವ ರಭಸದಲ್ಲಿ ಕಾರು ಬೈಕ್‍ಗೆ ಡಿಕ್ಕಿ ಹೊಡೆದಿದ್ದರಿಂದ ಯುವತಿಯರು ಫ್ಲೈಓವರ್ ನಿಂದ ಕೆಳಗೆ ಬಿದ್ದಿದ್ದಾರೆ.

 

ಅಪಘಾತದಲ್ಲಿ ಕಾರು ಸಹ ಜಕಂಗೊಂಡಿದ್ದು ಫೈಓವರ್ ನ ತುದಿಗೆ ಬಂದು ನಿಂತಿದೆ. ಇನ್ನು ಸ್ವಲ್ಪ ವಾಲಿದ್ದರೂ ಕಾರು ಸಹ ಫ್ಲೈಓವರ್ ಮೇಲಿನಿಂದ ಕೆಳಗೆ ಬೀಳುವ ಸಂಭವವಿತ್ತು. ಸದ್ಯ ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Source: publictv.in Source link