‘ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡ ಮಮತಾ ಬ್ಯಾನರ್ಜಿ’- ಬಿಜೆಪಿ ಹೀಗೆ ಆರೋಪ ಮಾಡಿದ್ಯಾಕೆ?

‘ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡ ಮಮತಾ ಬ್ಯಾನರ್ಜಿ’- ಬಿಜೆಪಿ ಹೀಗೆ ಆರೋಪ ಮಾಡಿದ್ಯಾಕೆ?

ಸಿಎಂ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದ ಸರ್ಕಾರಿ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ವಿಚಾರವಾಗಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್​ ನಡುವೆ ಕೆಸರೆರಚಾಟ ಶುರುವಾಗಿದೆ.

ಬಿಜೆಪಿ ನಾಯಕರನ್ನ ಕಟ್ಟಿಹಾಕಲು ಮಮತಾ ಬ್ಯಾನರ್ಜಿ ರಾಜ್ಯ ತನಿಖಾ ಸಂಸ್ಥೆ ದುರ್ಬಳಕೆ ಮಾಡಿಕೊಂಡಿದ್ದಾರೆ. ರಾಜ್ಯ ತನಿಖಾ ಸಂಸ್ಥೆ ಮೂಲಕ ಬಿಜೆಪಿ ನಾಯಕರ ವಿರುದ್ದ ತನಿಖೆ ಆರಂಭಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇನ್ನು, ಬಿಜೆಪಿ ನಾಯಕರನ್ನು ಕಟ್ಟಿ ಹಾಕಲಿಲ್ಲ ಎಂದರೆ ಮುಂದೆ ಟಿಎಂಸಿ ನಾಯಕರಿಗೆ ಬಂಗಾಳದಲ್ಲಿ ನೆಲೆ ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ರಾಜ್ಯ ತನಿಖಾ ಸಂಸ್ಥೆಗಳ ಮೂಲಕ ಮುಗಿದು ಹೋಗಿದ್ದ ಕೇಸ್​​ ಓಪನ್​ ಮಾಡಿಸಿ ಸುವೇಂದು ಅಧಿಕಾರಿ ವಿರುದ್ಧ ತನಿಖೆ ಮಾಡಿಸಲಾಗುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭಯಾನಕ ಆಕ್ಸಿಡೆಂಟ್; ತಮಿಳುನಾಡು ಮೂಲದ ಯುವಕ, ಯುವತಿ ಸಾವು

ಇದಕ್ಕೆ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರವೂ ತನ್ನ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಪ್ರತ್ಯಾರೋಪ ಎಸಗಿದ್ದಾರೆ.

Source: newsfirstlive.com Source link