2 ಬೈಕ್, ಟಿಟಿ ವಾಹನದ ಮಧ್ಯೆ ಭೀಕರ ಅಪಘಾತ; ಓರ್ವ ಸಾವು

2 ಬೈಕ್, ಟಿಟಿ ವಾಹನದ ಮಧ್ಯೆ ಭೀಕರ ಅಪಘಾತ; ಓರ್ವ ಸಾವು

ಬೆಂಗಳೂರು: ಎರಡು ಬೈಕ್, ಟಿಟಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಟಿ.ದಾಸರಹಳ್ಳಿಯ ಚೊಕ್ಕಸಂದ್ರ ಕೆರೆ ಬಳಿ ನಡೆದಿದೆ. ದುರ್ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

36 ವರ್ಷದ ಬಸವರಾಜ್ ಅಪಘಾತದಲ್ಲಿ ಸಾವನ್ನಪ್ಪಿದ ಮೃತ ಬೈಕ್ ಸವಾರ. ಬಸವರಾಜ್ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ. ಇನ್ನು ಫಾತಿಮಾ (20), ಮೊಹಮ್ಮದ್ ಅಲಿ (39) ದಂಪತಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

blank

ಘಟನಾ ಸ್ಥಳಕ್ಕೆ ಪೀಣ್ಯಾ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಟಿಟಿ ವಾಹನದ ಸಮೇತ ಚಾಲಕನನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಟಿಟಿ ವಾಹನದ ಅತಿವೇಗ ಹಾಗೂ ಅಡ್ಡಾದಿಡ್ಡಿ ಚಾಲನೆಯಿಂದ ಅಪಘಾತ ಸಂಭವಿಸಿದೆ ಅಂತಾ ಸ್ಥಳೀಯರು ದೂರಿದ್ದಾರೆ.

Source: newsfirstlive.com Source link