ಗೆಳೆಯ ರಾಜು ಪಾಟೀಲ್ ನಿಧನಕ್ಕೆ ಬೊಮ್ಮಾಯಿ ಸಂತಾಪ

ಬೆಂಗಳೂರು: ಸೋದರ ಸಂಬಂಧಿ ಹಾಗೂ ಆಪ್ತ ಸ್ನೇಹಿತ ರಾಜು ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಜು ಪಾಟೀಲ್ ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ರಾಜು ಪಾಟೀಲ್ ಒಬ್ಬ ಆಪ್ತ ಮಿತ್ರರಾಗಿದ್ದರು. ನಾವಿಬ್ಬರು ಬಾಲ್ಯದಿಂದ ಕೂಡಿಯೇ ಬೆಳೆದವರು. ನಾನು ಹುಬ್ಬಳ್ಳಿಯಲ್ಲಿ ಇದ್ದಾಗ ಅವರು ಸದಾ ನನ್ನ ಜೊತೆ ಇರುತ್ತಿದ್ದರು. ಅವರ ಅಗಲಿಕೆ ನನಗೆ ಅತೀವ ದುಃಖ ತರಿಸಿದೆ. ಅವರು ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಅಂದುಕೊಂಡಿರಲಿಲ್ಲ ಎಂದು ಸಿಎಂ ಕಂಬನಿ ಮಿಡಿದಿದ್ದಾರೆ.

ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ಅವರ ಕುಟುಂಬದವರಿಗೆ ನೀಡಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಆಪ್ತ ಸ್ನೇಹಿತ, ಸಂಬಂಧಿ  ನಿಧನ

Source: publictv.in Source link