ಕಬ್ಬಿನ ಗದ್ದೆಗೆ ಬೆಂಕಿ.. 15 ಕ್ಕೂ ಹೆಚ್ಚು ರೈತರ ಸಾವಿರಾರು ಟನ್ ಕಬ್ಬು ಬೆಳೆ ನಾಶ

ಕಬ್ಬಿನ ಗದ್ದೆಗೆ ಬೆಂಕಿ.. 15 ಕ್ಕೂ ಹೆಚ್ಚು ರೈತರ ಸಾವಿರಾರು ಟನ್ ಕಬ್ಬು ಬೆಳೆ ನಾಶ

ಚಿಕ್ಕೋಡಿ: ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು ಸಾವಿರಾರು ಟನ್ ಕಬ್ಬು ಬೆಳೆ ನಾಶವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದಲ್ಲಿ ನಡೆದಿದೆ. ಯಡೂರವಾಡಿ ಮತ್ತು ಮಾಂಜರಿವಾಡಿ ಗ್ರಾಮಕ್ಕೆ ಸೇರಿದ 15 ಕ್ಕೂ ಹೆಚ್ಚು ರೈತರ ಜಮೀನುಗಳ ಕಬ್ಬಿನ ಬೆಳೆಗೆ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿ ನಂದಿಸಲು ಸ್ಥಳೀಯರ ಹರಸಾಹಸ ಪಡುತ್ತಿದ್ದಾರೆ.. ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಲಕ್ಷಾಂತರ ರೂಪಾಯಿ ಬೆಳೆ ಹಾನಿಯಿಂದ 15 ಕ್ಕೂ ಹೆಚ್ಚು ರೈತರು ಕಂಗಾಲಾಗಿದ್ದಾರೆ. ಸಂಬಂಧಪಟ್ಟ ರೈತರಿಗೆ ಸರ್ಕಾರ ಆರ್ಥಿಕ ನೆರವು ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಅಂಕಲಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದುರ್ಘಟನೆ ನಡೆದಿದೆ.

Source: newsfirstlive.com Source link