BJP, RSS ನಕಲಿ ಹಿಂದುಗಳು, ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

ನವದೆಹಲಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಕಲಿ ಹಿಂದುಗಳು. ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸ್ಥಾಪನೆ ದಿನವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್‍ನ ಸಿದ್ಧಾಂತವು ಬಿಜೆಪಿ-ಆರ್‌ಎಸ್‌ಎಸ್‌ಗೆ ಸಂಪೂರ್ಣವಾಗಿ ವಿರುದ್ಧವಾಗಿದೆ. ಎರಡು ಸಿದ್ಧಾಂತಗಳಲ್ಲಿ ಒಂದು ಮಾತ್ರ ದೇಶವನ್ನು ಆಳಬಲ್ಲದು ಎಂದರು. ಇದನ್ನೂ ಓದಿ:  ಸಿಎಂ ಅಧಿಕೃತ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸಿದ ಬುಡಕಟ್ಟು ಜನಾಂಗದ ನಾಲ್ವರು

ಲಕ್ಷ್ಮಿ ದೇವಿಯು ಒಬ್ಬರ ಗುರಿ ಸಾಧಿಸಲು ಸಹಾಯ ಮಾಡುತ್ತಾರೆ. ದುರ್ಗಾ ದೇವಿಯು ರಕ್ಷಿಸುವ ಶಕ್ತಿಯನ್ನು ಹೊಂದಿದ್ದಾರೆ. ಅವರು ಯಾವ ರೀತಿಯ ಹಿಂದುಗಳು? ಅವರು ನಕಲಿ ಹಿಂದುಗಳು. ಅವರು ಹಿಂದೂ ಧರ್ಮವನ್ನು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಅವರು ಧರ್ಮದ ದಲ್ಲಾಳಿಗಳು, ಆದರೆ ಅವರು ಹಿಂದುಗಳಲ್ಲ ಎಂದು ರಾಹುಲ್ ಗಾಂಧಿ ಬಿಜೆಪಿ-ಆರ್‍ಎಸ್‍ಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

Source: publictv.in Source link