ಕರ್ನಾಟಕ: ರಾಜ್ಯದಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆ ವಿಚಾರದಲ್ಲಿ ಸದ್ಯ ಹಸಿರು ನ್ಯಾಯ ಮಂಡಳಿಯಿಂದ ಕರ್ನಾಟಕಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಈ ಯೋಜನೆಗೆ ತಡೆ ಕೋರುವ ಅರ್ಜಿಯ ವಿಚಾರಣೆ ನಡೆಸಿದ ಎನ್.ಜಿ.ಟಿ (National Green Tribunal) ಇಂದು ರಾಜ್ಯದ ವಾದವನ್ನು ಮನ್ನಿಸಿ, ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಿಎಸ್​ ಯಡಿಯೂರಪ್ಪ.. ಮೇಕೆದಾಟು ಯೋಜನೆ ರಾಜ್ಯಕ್ಕೆ ಮಹತ್ವದಾಗಿದೆ. ಇದರಿಂದ ಬೆಂಗಳೂರಿಗೆ ಕುಡಿಯೋ ನೀರು ಒದಗಿಸಲಾಗುತ್ತದೆ. ಅಲ್ಲದೇ 4 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ಅನುಕೂಲ ಆಗಲಿದೆ.

ಆದರೆ ಇದಕ್ಕೆ ತಮಿಳುನಾಡು ಸರ್ಕಾರ ವಿರೋಧ ಮಾಡಿ ಎನ್​ಜಿಟಿಗೆ ಅರ್ಜಿ ಸಲ್ಲಿಸಿತ್ತು. ಆದರೆ ಎನ್​ಜಿಟಿ ನಮ್ಮ ವಾದವನ್ನ ಮನ್ನಿಸಿ ಯೋಜನೆಗೆ ಹಸಿರು ನಿಶಾನೆ ತೋರಿದೆ. ಕೇಂದ್ರದ ನಾಯಕರ ಜೊತೆ ಮಾತುಕತೆ ನಡೆಸಿ ಯೋಜನೆಯ ಆರಂಭಕ್ಕೆ ಎಲ್ಲಾ ಕ್ರಮ ಕೈಗೊಳ್ತೀವಿ ಎಂದು ತಿಳಿಸಿದರು.

ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ಯೋಜನೆ: ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಕೊಟ್ಟ NGT

The post ‘NGT ನಿರ್ಧಾರ ಸ್ವಾಗತಾರ್ಹ.. ಮೇಕೆದಾಟು ಯೋಜನೆ ಆರಂಭಕ್ಕೆ ಶೀಘ್ರದಲ್ಲೇ ಕ್ರಮ’ appeared first on News First Kannada.

Source: newsfirstlive.com

Source link