NHAI Recruitment 2022: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ | NHAI Recruitment 2022 for 6 Deputy General Manager, Hindi Officer Posts


NHAI Recruitment 2022: ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

NHAI Recruitment 2022: ಭಾರತ ಸರ್ಕಾರದ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅರ್ಹ ಅಭ್ಯರ್ಥಿಗಳಿಂದ ಡೆಪ್ಯೂಟಿ ಜನರಲ್ ಮ್ಯಾನೇಜರ್ ಮ್ಯಾನೇಜರ್, ಮ್ಯಾನೇಜರ್, ಹಿಂದಿ ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

NHAI ನೇಮಕಾತಿ ವಿವರಗಳು:

ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ: 6

ಪೋಸ್ಟ್ ವಿವರಗಳು: ಡೆಪ್ಯುಟಿ ಜನರಲ್ ಮ್ಯಾನೇಜರ್, ಮ್ಯಾನೇಜರ್, ಹಿಂದಿ ಆಫೀಸರ್ ಹುದ್ದೆಗಳು

ವೇತನ ಶ್ರೇಣಿ: ತಿಂಗಳಿಗೆ ರೂ.39,100/-

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 48 ವರ್ಷಗಳನ್ನು ಮೀರಬಾರದು.

ವಿದ್ಯಾರ್ಹತೆ: ಹಿಂದಿ ಅಥವಾ ತತ್ಸಮಾನದಲ್ಲಿ ಸ್ಪೆಷಲೈಸೇಶನ್‌ನಲ್ಲಿ ಕಾನೂನು ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು. ಸಂಬಂಧಿತ ಕೆಲಸದಲ್ಲಿ ಅನುಭವವನ್ನೂ ಹೊಂದಿರಬೇಕು.

ಆಯ್ಕೆ ವಿಧಾನ: ಆಯ್ಕೆ ಸಮಿತಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅಪ್ಲಿಕೇಶನ್ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ / ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು

ವಿಳಾಸ: DGM (HR & Admin), National Highways Authority of India, Sector-10, Dwarka, New Delhi-110075

ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 24, 2022.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

TV9 Kannada


Leave a Reply

Your email address will not be published. Required fields are marked *