Nokia G21: ಬಿಡುಗಡೆಯಾದ ದಿನವೇ ಭರ್ಜರಿ ಸದ್ದು ಮಾಡುತ್ತಿದೆ ನೋಕಿಯಾದ ಹೊಸ ಸ್ಮಾರ್ಟ್​ಫೋನ್ | Nokia G21 The budget smartphone has been officially launched in India


Nokia G21: ಬಿಡುಗಡೆಯಾದ ದಿನವೇ ಭರ್ಜರಿ ಸದ್ದು ಮಾಡುತ್ತಿದೆ ನೋಕಿಯಾದ ಹೊಸ ಸ್ಮಾರ್ಟ್​ಫೋನ್

Nokia G21

ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆ ಇಂದು ತುಂಬಾನೆ ವಿಶಾಲವಾಗಿದೆ. ಶವೋಮಿ (Xiaomi), ಸ್ಯಾಮ್​ಸಂಗ್, ರಿಯಲ್ ಮಿ, ಒಪ್ಪೋ ಹೀಗೆ ಅನೇಕ ಬ್ರ್ಯಾಂಡ್​ಗಳು ಹುಟ್ಟುಕೊಂಡಿದ್ದು ಕಡಿಮೆ ಬೆಲೆಗೆ ಆಕರ್ಷಕ ಮೊಬೈಲ್​ಗಳನ್ನು ಬಿಡುಗಡೆ ಮಾಡುತ್ತಿವೆ. ಹೀಗಿರುವಾಗ ಚೀನಾ ಸ್ಮಾರ್ಟ್​ಫೋನ್ ಬ್ರ್ಯಾಂಡ್​ಗಳ ನಡುವೆ ತನ್ನದೇ ಆದ ವಿಶೇಷ ಸ್ಥಾನ ಉಳಿಸಿಕೊಂಡಿರುವ ನೋಕಿಯಾ ಕಂಪನಿ ಆಗಾಗ ವಿಶೇಷ ಫೋನ್​ಗಳನ್ನು ಪರಿಚಯಿಸುತ್ತಿರುತ್ತದೆ. ಇದೀಗ ನೋಕಿಯಾ ಕಂಪನಿ ತನ್ನ ಹೊಸ ನೋಕಿಯಾ ಜಿ21 (Nokia G21) ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.5-ಇಂಚಿನ LCD ಡಿಸ್‌ಪ್ಲೇ ಹೊಂದಿದೆ. ಯುನಿಸೊಕ್ T606 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಬಲಿಷ್ಠವಾದ 5050mAh ಸಾಮರ್ಥ್ಯದ ಬ್ಯಾಟರಿ ಪವರ್ ನೀಡಲಾಗಿದೆ. ಇದು ಬಜೆಟ್ ಬೆಲೆಗೆ ಸಿಗುತ್ತಿದೆ ಎಂಬುವು ವಿಶೇಷ.

ಬೆಲೆ ಎಷ್ಟು?:

ನೋಕಿಯಾ G21 ಸ್ಮಾರ್ಟ್‌ಫೋನ್‌ ಭಾರತೀಯ ಮಾರುಕಟ್ಟೆಯಲ್ಲಿ ಒಟ್ಟು ಎರಡು ಸ್ಟೋರೆಜ್ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಇದರ 4GB RAM ಮತ್ತು 64GB ಸ್ಟೋರೇಜ್ ರೂಪಾಂತರಕ್ಕೆ ಕೇವಲ 12,999 ರೂ. ನಿಗದಿ ಮಾಡಲಾಗಿದೆ. ಹಾಗೆಯೇ 6GB RAM ಮತ್ತು 128GB ಆವೃತ್ತಿಯ ಆಯ್ಕೆಗೆ 14,999 ರೂ. ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಪ್ರಸಿದ್ಧ ಇ ಕಾಮರ್ಸ್​ ತಾಣವಾದ ಅಮೆಜಾನ್, ಫ್ಲಿಪ್​ಕಾರ್ಟ್​​, ನೋಕಿಯಾದ ಅಧಿಕೃತ ವೆಬ್​ಸೈಟ್ ಸೇರಿದಂತೆ ಮೊಬೈಲ್ ಮಳಿಗೆಗಳ ಮೂಲಕ ನಿಮ್ಮದಾಗಿಸಬಹುದು. ಇದು ನಾರ್ಡಿಕ್ ಬ್ಲೂ ಮತ್ತು ಡಸ್ಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಏನು ವಿಶೇಷತೆ?:

ನೋಕಿಯಾ G21 ಸ್ಮಾರ್ಟ್‌ಫೋನ್‌ 1,600×720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ IPS ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.  ಯುನಿಸೊಕ್ T606 ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ವಿಶೇಷವಾಗಿ ಎಲ್‌ಇಡಿ ಫ್ಲ್ಯಾಷ್ ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡು ಮತ್ತು ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ನೋಕಿಯಾ G21 ಸ್ಮಾರ್ಟ್‌ಫೋನ್‌ 5,050mAh ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi, 4G, ಬ್ಲೂಟೂತ್ v5, GPS, A-GPS, Beidou, ಯುಎಸ್‌ಬಿ ಟೈಪ್‌-ಸಿ ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್‌ ಮತ್ತು ಲೈಟ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ.

WhatsApp: ವಾಟ್ಸ್​​ಆ್ಯಪ್​​ನಲ್ಲಿರುವ ಮಲ್ಟಿಡಿವೈಸ್ ಆಯ್ಕೆಯನ್ನು ಅನ್​ಲಿಂಕ್ ಮಾಡುವುದು ಹೇಗೆ?

TV9 Kannada


Leave a Reply

Your email address will not be published. Required fields are marked *