Organ Donation: ರಿಸೆಪ್ಷನ್ ವೇಳೆ ಕುಸಿದು ಬಿದ್ದ ಮದುಮಗಳು, ಬ್ರೈನ್ ಡೆಡ್ – ಅಂಗಾಂಗ ದಾನ ಮಾಡಿದ ಕುಟುಂಬಸ್ಥರು | Chitra a bride from srinivaspur brain dead during her wedding reception parents donate her body organs at nimhans bangalore


Organ Donation: ರಿಸೆಪ್ಷನ್ ವೇಳೆ ಕುಸಿದು ಬಿದ್ದ ಮದುಮಗಳು, ಬ್ರೈನ್ ಡೆಡ್ - ಅಂಗಾಂಗ ದಾನ ಮಾಡಿದ ಕುಟುಂಬಸ್ಥರು

ರಿಸೆಪ್ಷನ್ ವೇಳೆ ಕುಸಿದು ಬಿದ್ದ ಮದುಮಗಳು, ಬ್ರೈನ್ ಡೆಡ್ – ಅಂಗಾಂಗ ದಾನ ಮಾಡಿದ ಕುಟುಂಬಸ್ಥರು

ಕೋಲಾರ: ಮದುವೆಯಾಗಿ ಸುಖ ಜೀವನ ಕಾಣಬೇಕಿದ್ದ ಯುವತಿಯೊಬ್ಬಳ ಜೀವನದಲ್ಲಿ ವಿಧಿ ತನ್ನ ಲೀಲೆ ತೋರಿದೆ. ಆ ಯುವತಿಯ ಸುಂದರ ಬದುಕನ್ನು ಮದುವೆ ರಿಸೆಪ್ಷನ್ ವೇಳೆಯೇ ಚಿವುಟಿಹಾಕಿದೆ. ತನ್ನ ಮದುವೆಯ ಆರತಕ್ಷತೆಯಲ್ಲಿ ಕುಸಿದು ಬಿದ್ದು ಮದುಮಗಳು (bride) ಅಸ್ವಸ್ಥಳಾಗಿದ್ದಾಳೆ. ತಕ್ಷಣ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ (nimhans) ಸೇರಿಸಲಾಗಿ, ಅಲ್ಲಿನ ವೈದ್ಯರು ಆಕೆಯನ್ನು ಬ್ರೈನ್ ಡೆಡ್ (brain dead) ಎಂದು ಘೋಷಣೆ ಮಾಡಿರುವ ಮನಕಲಕುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ.

ಚೈತ್ರಾ (26) ಬ್ರೈನ್ ಡೆಡ್ ಆಗಿ ಅಸ್ವಸ್ಥಳಾದ ಮದುಮಗಳು. ಈ ಯುವತಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮೂಲದವರು. ಆಕೆಯ ನಿಧನಾನಂತರ ಚೈತ್ರಾಳ ಅಂಗಾಂಗ ದಾನಕ್ಕೆ ನಿರ್ಧಾರ ಮಾಡಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿ, ಕರುಣಾಜನಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಸಾರಾಂಶ ಹೀಗಿದೆ:
It was a big day for the 26-year Chaitra but destiny had other plans. She collapsed during her wedding reception at Srinivasapur in Kolar district. She was later declared as brain dead at NIMHANS. Despite the heart breaking tragedy, her parents have decided to donate her organs.

TV9 Kannada


Leave a Reply

Your email address will not be published.