PAK vs AUS, Live Score, T20 World Cup 2021: ಟಾಸ್ ಗೆದ್ದ ಆಸ್ಟ್ರೇಲಿಯಾ; ಪಾಕಿಸ್ತಾನ ಬ್ಯಾಟಿಂಗ್


ICC T20 ವಿಶ್ವಕಪ್ 2021 ರ ಎರಡನೇ ಸೆಮಿಫೈನಲ್‌ನಲ್ಲಿ ಇಂದು ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಿವೆ. ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಈ ಮಹತ್ವದ ಪಂದ್ಯದ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ನಾಯಕ ಆರನ್ ಫಿಂಚ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಪಾಕಿಸ್ತಾನ ತಂಡವು ಗ್ರೂಪ್ ಹಂತದಲ್ಲಿ ಎಲ್ಲಾ ಐದು ಪಂದ್ಯಗಳನ್ನು ಗೆದ್ದು ಮೂರನೇ ಬಾರಿಗೆ ಫೈನಲ್‌ಗೆ ಲಗ್ಗೆ ಇಡಲು ಪ್ರಯತ್ನಿಸುತ್ತಿದೆ. ಅದೇ ಸಮಯದಲ್ಲಿ, ತನ್ನ ಗುಂಪಿನಲ್ಲಿ 4 ಪಂದ್ಯಗಳನ್ನು ಗೆದ್ದಿರುವ ಆಸ್ಟ್ರೇಲಿಯನ್ ತಂಡವು ಸೆಮಿಫೈನಲ್‌ಗೆ ಪ್ರವೇಶಿಸಿದ್ದು, ಪ್ರತಿಯೊಂದು ಊಹೆ ಮತ್ತು ಊಹಾಪೋಹಗಳನ್ನು ತಪ್ಪೆಂದು ಸಾಬೀತುಪಡಿಸಿದೆ. ಆಸ್ಟ್ರೇಲಿಯ ತಂಡ ಈ ಹಿಂದೆ 2010ರಲ್ಲಿ ಮಾತ್ರ ಫೈನಲ್ ತಲುಪಿದ್ದು, ಇದೀಗ 11 ವರ್ಷಗಳ ಬಳಿಕ ಫೈನಲ್ ಪ್ರವೇಶಿಸುವ ಅವಕಾಶ ಪಡೆದಿದೆ.

TV9 Kannada


Leave a Reply

Your email address will not be published. Required fields are marked *