ಸಿಬಿಎಸ್ಇ ಬೋರ್ಡ್ ಸಿಲಬಸ್ ಎಂದು ಹೇಳಿ ವಂಚನೆ ಮಾಡಲಾಗಿದೆ ಎಂದು ಶಾಲಾ ಆಡಳಿತ ಮಂಡಳಿ ಕಚೇರಿ ಬಳಿ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ.

ಆರ್ಕಿಡ್ ಇಂಟರ್ನ್ಯಾಷನಲ್ ಶಾಲೆ ವಿರುದ್ಧ ಪೋಷಕರ ಪ್ರತಿಭಟನೆ
ಬೆಂಗಳೂರು: ಕೆಲ ತಿಂಗಳ ಹಿಂದೆ ಬಿಟಿಎಂ ಲೇಔಟ್ ಆರ್ಕಿಡ್ ಶಾಲೆ ವಿರುದ್ಧ ಪೋಷಕರು ಪ್ರತಿಭಟನೆ ನಡೆಸಿದ್ದರು. ಈಗ ನಾಗರಬಾವಿ ಬಳಿ ಇರುವ ಆರ್ಕಿಡ್ ಇಂಟರ್ನ್ಯಾಷನಲ್ ಶಾಲೆ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು ಇಂದು ಪೋಷಕರು ಶಾಲೆ ಮುಂದೆ ಭಾರೀ ಪ್ರತಿಭಟನೆ ನಡೆಸಿದ್ದಾರೆ. ಸಿಬಿಎಸ್ಇ ಬೋರ್ಡ್ ಸಿಲಬಸ್ ಎಂದು ಹೇಳಿ ವಂಚನೆ ಮಾಡಲಾಗಿದೆ ಎಂದು ಶಾಲಾ ಆಡಳಿತ ಮಂಡಳಿ ಕಚೇರಿ ಬಳಿ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ.
ತಮ್ಮ ಮಕ್ಕಳ ಉಜ್ವಲ ಭವಿಷ್ಯದ ಕನಸು ಕಂಡು ಶಾಲೆಗೆ ಸೇರಿಸಿದ ಪೋಷಕರು ರಸ್ತೆಯಲ್ಲಿ ಗಲಾಟೆ ಮಾಡ್ತಿದ್ದಾರೆ. ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಸಿಬಿಎಸ್ಇ ಬೋರ್ಡ್ ಮಾನ್ಯತೆ ಪಡೆದ ಶಾಲೆ ಎಂದು ಹೇಳಿದ್ರು. ಈಗ ಸಿಬಿಎಸ್ಇ ಬದಲು ಪಬ್ಲಿಕ್ ಪರೀಕ್ಷೆ ಬರೆಸಲು ಮುಂದಾಗಿದ್ದಾರೆ. ಸಿಬಿಎಸ್ಇ ಬೋರ್ಡ್ ಮಾನ್ಯತೆ ಪಡೆದ ಶಾಲೆ ಎಂದು ಹೇಳಿ ಲಕ್ಷಾಂತರ ಹಣ ಪಡೆದು ವಂಚನೆ ಮಾಡಿದ್ದಾರೆಂದು ಶಾಲೆ ವಿರುದ್ಧ ಪೋಷಕರು ಆರೋಪ ಮಾಡಿದ್ದಾರೆ. ಜೊತೆಗೆ ಶಾಲಾ ಆಡಳಿತ ಮಂಡಳಿ ವಿರುದ್ಧ FIR ದಾಖಲಿಸುವಂತೆ ಆಗ್ರಹಿಸಿದ್ದಾರೆ.
ತಾಜಾ ಸುದ್ದಿ