Pathaan Movie Twitter Review: ಶಾರುಖ್ ಖಾನ್ ಅವರು ನಾಲ್ಕು ವರ್ಷಗಳ ಬಳಿಕ ದೊಡ್ಡ ಪರದೆಗೆ ಮರಳಿದ್ದಾರೆ. ಅವರು ಮಾಸ್ ಅವತಾರದಲ್ಲಿ ಮರಳಿದ್ದಾರೆ ಎಂಬುದಕ್ಕೆ ಟ್ರೇಲರ್ ಸಾಕ್ಷ್ಯಸಿಕ್ಕಿತ್ತು. ಸಿನಿಮಾ ಕೂಡ ಅದೇ ರೀತಿ ಇದೆ.

ಪಠಾಣ್ ಚಿತ್ರದಲ್ಲಿ ಶಾರುಖ್ ಖಾನ್
ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್’ ಸಿನಿಮಾ ಇಂದು (ಜನವರಿ 25) ರಿಲೀಸ್ ಆಗಿದೆ. ಈ ಚಿತ್ರವನ್ನು ಶಾರುಖ್ ಅಭಿಮಾನಿಗಳು ಕಣ್ತುಂಬಿಕೊಳ್ಳುತ್ತಿದ್ದಾರೆ. ಅನೇಕ ಕಡೆಗಳಲ್ಲಿ ಮುಂಜಾನೆಯಿಂದಲೇ ಶೋಗಳನ್ನು ಆಯೋಜನೆ ಮಾಡಲಾಗಿದೆ. ‘ಪಠಾಣ್’ ಚಿತ್ರವನ್ನು (Pathan Twitter Review) ನೋಡಿದ ಪ್ರೇಕ್ಷಕರು ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಶಾರುಖ್ ಖಾನ್ ಹಾಗೂ ಜಾನ್ ಅಬ್ರಾಹಂ ಅವರ ಮುಖಾಮುಖಿಯನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ.
ಶಾರುಖ್ ಖಾನ್ ಅವರು ನಾಲ್ಕು ವರ್ಷಗಳ ಬಳಿಕ ದೊಡ್ಡ ಪರದೆಗೆ ಮರಳಿದ್ದಾರೆ. ಅವರು ಮಾಸ್ ಅವತಾರದಲ್ಲಿ ಮರಳಿದ್ದಾರೆ ಎಂಬುದಕ್ಕೆ ಟ್ರೇಲರ್ ಸಾಕ್ಷ್ಯಸಿಕ್ಕಿತ್ತು. ಸಿನಿಮಾ ಕೂಡ ಅದೇ ರೀತಿ ಇದೆ. ಚಿತ್ರ ನೋಡಿದ ನೆಟ್ಟಿಗರು ತಮ್ಮ ವಿಮರ್ಶೆ ತಿಳಿಸುತ್ತಿದ್ದಾರೆ.
ತಾಜಾ ಸುದ್ದಿ
‘ಪಠಾಣ್ ಹೈವೋಲ್ಟೇಜ್ ಆ್ಯಕ್ಷನ್ ಸಿನಿಮಾ. ಸಿದ್ದಾರ್ಥ್ ಆನಂದ್ ಅವರ ನಿರೂಪಣೆ ಉತ್ತಮವಾಗಿದೆ. ಶಾರುಖ್ ಖಾನ್ ಅವರ ಪರ್ಫಾರ್ಮೆನ್ಸ್ ಅದ್ಭುತವಾಗಿದೆ. ಜಾನ್ ಅಬ್ರಾಹಂ ಹಾಗೂ ದೀಪಿಕಾ ಪಡುಕೋಣೆ ಅವರು ಉತ್ತಮ ನಟನೆ ತೋರಿದ್ದಾರೆ. ಹಲವು ಟ್ವಿಸ್ಟ್ಗಳಿವೆ. ಪಠಾಣ್ ಎಂಟರ್ಟೇನಿಂಗ್ ಆಗಿದೆ’ ಎಂದು ಅಭಿಮಾನಿಯೋರ್ವ ಬರೆದುಕೊಂಡಿದ್ದಾನೆ.