Pay CM: ಪೋಸ್ಟರ್ ಅಂಟಿಸಿದ ಕೈ ನಾಯಕರು; ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕೆಲವರ ವಿರುದ್ಧ ಎನ್​ಸಿಆರ್ ದಾಖಲು | Congress leaders pasting Pay CM poster NCR filed against Siddaramaiah D.K.Shivakumar and others


ಅನುಮತಿ ಪಡೆಯದೆ ಏಕಾಏಕಿ ರಸ್ತೆಗೆ ಇಳಿದು ಪೇ ಸಿಎಂ ಪೋಸ್ಟರ್​ಗಳನ್ನು ಅಂಟಿಸಿದ ಪ್ರಕರಣ ಸಂಬಂಧ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಕೆಲವರು ವಿರುದ್ಧ ಎನ್​ಸಿಆರ್​ ದಾಖಲಾಗಿದೆ.

Pay CM: ಪೋಸ್ಟರ್ ಅಂಟಿಸಿದ ಕೈ ನಾಯಕರು; ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕೆಲವರ ವಿರುದ್ಧ ಎನ್​ಸಿಆರ್ ದಾಖಲು

ಪೇ ಸಿಎಂ ಪೋಸ್ಟರ್ ಅಂಟಿಸಿದ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕೆಲವರ ವಿರುದ್ಧ ಎನ್​ಸಿಆರ್ ದಾಖಲು

TV9kannada Web Team

| Edited By: Rakesh Nayak

Sep 24, 2022 | 10:56 AM
ಬೆಂಗಳೂರು: ಅನುಮತಿ ಪಡೆಯದೆ ಏಕಾಏಕಿ ರಸ್ತೆಗೆ ಇಳಿದು ಪೇ ಸಿಎಂ ಪೋಸ್ಟರ್​ಗಳನ್ನು ಅಂಟಿಸಿದ ಪ್ರಕರಣ ಸಂಬಂಧ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಸೇರಿದಂತೆ ಕೆಲವರು ವಿರುದ್ಧ ಎನ್​ಸಿಆರ್​ ದಾಖಲಾಗಿದೆ. ರಾಜ್ಯದಲ್ಲಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ವಿರೋಧ ಪಕ್ಷ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸುತ್ತಿದ್ದು, ಇದರ ಭಾಗವಾಗಿ ಪೇ ಸಿಎಂ ಪೋಸ್ಟರ್ ಅನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಲಾಗುತ್ತಿದೆ. ಇದರ ವಿರುದ್ಧ ಸರ್ಕಾರ ಕ್ರಮ ಕೈಗೊಂಡ ಹಿನ್ನೆಲೆ ಕಾಂಗ್ರೆಸ್ ನಾಯಕರು ಸಭೆ ನಡೆಸಿ ಯಾವುದೇ ಅನುಮತಿ ಪಡೆಯದೆ ಏಕಾಏಕಿ ರಸ್ತೆಗೆ ಇಳಿದು ಪೋಸ್ಟರ್ ಅಂಟಿಸಿದ್ದರು. ಈ ಸಂಬಂಧ ಪೊಲೀಸರು ಎನ್​ಸಿಆರ್ ದಾಖಲಿಸಿದ್ದಾರೆ.

ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಪೇ ಸಿಎಂ ಪೋಸ್ಟರ್ ಅಂಟಿಸುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಆಗಮಿಸಿ ನಡೆಸಿದ ಸಭೆಯಲ್ಲಿ ಪೋಸ್ಟರ್ ಅಭಿಯಾನದ ಬಗ್ಗೆ ಚರ್ಚೆ ನಡೆದಿದೆ. ಸಭೆ ಬಳಿಕ ಅನುಮತಿ ಇಲ್ಲದೇ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಏಕಾಏಕಿ ರಸ್ತೆಗೆ ಬಂದಿದ್ದ ಕೈ ನಾಯಕರು ರೇಸ್​ಕೋರ್ಸ್​​ ಗೋಡೆಗೆ ಪೇ ಸಿಎಂ ಪೋಸ್ಟರ್ ಅಂಟಿಸಿದ್ದರು. ಈ ವೇಳೆ ರಸ್ತೆಯಲ್ಲಿ ಗುಂಪು ಸೇರಿ ಪರಿಣಾಮ ರಸ್ತೆ ಸಂಚಾರಕ್ಕೂ ಅಡಚಣೆ ಉಂಡಾಗಿತ್ತು. ಈ ಹಿಂದೆ ಪೋಸ್ಟರ್ ಅಂಟಿಸಿದ್ದ ಐವರ ವಿರುದ್ಧ ಬಿಬಿಎಂಪಿ ಅಧಿಕಾರಿಗಳ ದೂರಿನ ಮೇರೆಗೆ ಎಫ್​ಐಆರ್ ದಾಖಲಾಗಿತ್ತು.

ತಾಜಾ ಸುದ್ದಿ

TV9 Kannada


Leave a Reply

Your email address will not be published.