PBKS vs SRH Playing XI IPL 2022: ಗೆಲುವಿನ ಲಯದಲ್ಲಿ ಉಭಯ ತಂಡಗಳು: ಹೀಗಿರಲಿದೆ ಪ್ಲೇಯಿಂಗ್ 11 | PBKS vs SRH Playing XI IPL Punjab Kings Team Sunrisers Hyderabad Team players to watch out for tomorrow IPL Match 17 april in Kannada


PBKS vs SRH Playing XI IPL 2022: ಗೆಲುವಿನ ಲಯದಲ್ಲಿ ಉಭಯ ತಂಡಗಳು: ಹೀಗಿರಲಿದೆ ಪ್ಲೇಯಿಂಗ್ 11

PBKS vs SRH

ಇಂಡಿಯನ್ ಪ್ರೀಮಿಯರ್ ಲೀಗ್​ನ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಉಭಯ ತಂಡಗಳು ಗೆಲುವಿನ ಲಯದಲ್ಲಿದ್ದು, ಹೀಗಾಗಿ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನು ಎದುರು ನೋಡಬಹುದು. ಏಕೆಂದರೆ ಸನ್​ರೈಸರ್ಸ್​ ಹೈದರಾಬಾದ್ ತಂಡವು ಮೊದಲೆರಡು ಪಂದ್ಯಗಳಲ್ಲಿನ ಸೋಲಿನ ನಂತರ ಪ್ರಚಂಡ ಪುನರಾಗಮನ ಮಾಡಿದೆ. ಆ ಬಳಿಕ ಸತತ 3 ಪಂದ್ಯಗಳನ್ನು ಗೆದ್ದು ಎಲ್ಲರನ್ನು ಅಚ್ಚರಿಗೊಳಿಸಿದೆ. ಅದೇ ಫಾರ್ಮ್ ಅನ್ನು ಕಾಯ್ದುಕೊಳ್ಳುವ ಗುರಿಯೊಂದಿಗೆ, ಹೈದರಾಬಾದ್ ತಂಡವು ಭಾನುವಾರ ಮೈದಾನಕ್ಕೆ ಇಳಿಯಲಿದೆ. ಮತ್ತೊಂದೆಡೆ ಪಂಜಾಬ್ ಕಿಂಗ್ಸ್​ ತಂಡವು 3 ಪಂದ್ಯಗಳನ್ನು ಗೆದ್ದಿದ್ದರೆ, 2 ರಲ್ಲಿ ಸೋತಿದೆ. ಹೈದರಾಬಾದ್ ಎರಡು ಸೋಲಿನ ನಂತರ ಮೂರು ಗೆಲುವು ದಾಖಲಿಸಿದೆ. ಹೀಗಾಗಿ ಈ ಪಂದ್ಯದ ಫಲಿತಾಂಶ ಉಭಯ ತಂಡಗಳ ಪಾಯಿಂಟ್​ ಟೇಬಲ್​ನಲ್ಲಿನ ಸ್ಥಾನವನ್ನು ಬದಲಿಸಲಿದೆ. ಹಾಗಾಗಿ ಎರಡೂ ತಂಡಗಳು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲಿದೆ.

ಬೈರ್‌ಸ್ಟೋ ಸ್ಥಾನಕ್ಕೆ ರಾಜಪಕ್ಸೆ?
ಮುಂಬೈ ಇಂಡಿಯನ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ, ತಂಡದ ನಾಯಕ ಮಯಾಂಕ್ ಅಗರ್ವಾಲ್ ಮತ್ತು ಶಿಖರ್ ಧವನ್ ಜೋಡಿ ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದರು. ಅಲ್ಲದೆ ನಂತರ ಬಂದ ಇತರ ಬ್ಯಾಟ್ಸ್‌ಮನ್‌ಗಳು ಕೆಳ ಕ್ರಮಾಂಕದಲ್ಲಿ ಕೊಡುಗೆ ನೀಡಿದರು. ಇದಾಗ್ಯೂ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಜಾನಿ ಬೈರ್‌ಸ್ಟೋವ್ ಸತತವಾಗಿ ವಿಫಲರಾಗುತ್ತಿದ್ದಾರೆ. ಹೀಗಾಗಿ ಮೊದಲ ಮೂರು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಭಾನುಕಾ ರಾಜಪಕ್ಸೆ ಅವರಿಗೆ ಚಾನ್ಸ್ ನೀಡುವ ಸಾಧ್ಯತೆಯಿದೆ.

ಮತ್ತೊಂದೆಡೆ ಎಸ್​ಆರ್​ಹೆಚ್​ ತಂಡದ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಗಾಯಗೊಂಡಿದ್ದರಿಂದ ಕಳೆದ ಪಂದ್ಯದಲ್ಲಿ ಒಂದೇ ಒಂದು ಬದಲಾವಣೆ ಮಾಡಿ ಜಗದೀಶ ಸುಚಿತ್ ಗೆ ಅವಕಾಶ ನೀಡಿತ್ತು. ಈ ಪಂದ್ಯಕ್ಕೂ ಅವರು ಫಿಟ್ ಆಗುವುದು ಅನುಮಾನ. ಹೀಗಾಗಿ ಸುಚಿತ್ ಅವರನ್ನು ಉಳಿಸಿಕೊಳ್ಳಬಹುದು. ಹಾಗಾಗಿ ಎಸ್​ಆರ್​ಹೆಚ್​​ ತಂಡದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿಲ್ಲ ಎನ್ನಬಹುದು. ಅದರಂತೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ.

ಪಂಜಾಬ್ ಕಿಂಗ್ಸ್: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟನ್, ಜಿತೇಶ್ ಶರ್ಮಾ, ಶಾರುಖ್ ಖಾನ್, ಓಡಿಯನ್ ಸ್ಮಿತ್, ಕಗಿಸೊ ರಬಾಡ, ಅರ್ಶ್‌ದೀಪ್ ಸಿಂಗ್, ರಾಹುಲ್ ಚಹರ್, ವೈಭವ್ ಅರೋರಾ

ಸನ್‌ರೈಸರ್ಸ್ ಹೈದರಾಬಾದ್ : ಕೇನ್ ವಿಲಿಯಮ್ಸನ್ (ನಾಯಕ), ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಡನ್ ಮಾರ್ಕ್ರಾಮ್, ನಿಕೋಲಸ್ ಪೂರನ್, ಶಶಾಂಕ್ ಸಿಂಗ್, ಜಗದೀಶ ಸುಚಿತ್, ಭುವನೇಶ್ವರ್ ಕುಮಾರ್, ಮಾರ್ಕೊ ಯಾನ್ಸನ್, ಉಮ್ರಾನ್ ಮಲಿಕ್ ಮತ್ತು ಟಿ ನಟರಾಜನ್

TV9 Kannada


Leave a Reply

Your email address will not be published.