Petition challenging appointment of administrator to muruga mutt: high court diced to rehearing | ಚಿತ್ರದುರ್ಗ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರ: ಮತ್ತೆ ವಿಚಾರಣೆ ನಡೆಸಲು ಹೈಕೋರ್ಟ್​ ತೀರ್ಮಾನ


ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಹೈ ಕೋರ್ಟ್​​ಗೆ ಡಿ.ಎಸ್.ಮಲ್ಲಿಕಾರ್ಜುನ ಮತ್ತಿತರು ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಚಿತ್ರದುರ್ಗ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರ: ಮತ್ತೆ ವಿಚಾರಣೆ ನಡೆಸಲು ಹೈಕೋರ್ಟ್​ ತೀರ್ಮಾನ

ಕರ್ನಾಟಕ ಉಚ್ಚ ನ್ಯಾಯಾಲಯ

ಬೆಂಗಳೂರು: ಚಿತ್ರದುರ್ಗದ (Chitradurga) ಮುರುಘಾಮಠಕ್ಕೆ (Murugha Math) ಆಡಳಿತಾಧಿಕಾರಿಯಾಗಿ ನಿವೃತ್ತ IAS ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಸರ್ಕಾರ ನೇಮಿಸಿದನ್ನು ಪ್ರಶ್ನಿಸಿ ಡಿ.ಎಸ್.ಮಲ್ಲಿಕಾರ್ಜುನ ಮತ್ತಿತರು ಹೈಕೋರ್ಟ್​ಗೆ (High Court) ರಿಟ್ ಅರ್ಜಿ ಸಲ್ಲಿಸಿದ್ದರು. ಡಿಸೆಂಬರ್​ 16 2022ರಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​, ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಇಂದು (ಜ.2) ಲಿಖಿತ ವಾದಾಂಶದಲ್ಲಿ ಹೊಸ‌ ಅಂಶ‌ ಪ್ರಸ್ತಾಪ ಹಿನ್ನೆಲೆ ಮತ್ತೆ ವಿಚಾರಣೆ ನಡೆಸಲು ನ್ಯಾ.ಕೃಷ್ಣ ಎಸ್.ದೀಕ್ಷಿತ್ ಇದ್ದ ಪೀಠ ನಿರ್ಧರಿಸಿದೆ.

ಅರ್ಜಿಯಲ್ಲಿ ಕೆಲ ತಿದ್ದುಪಡಿ ಸೇರ್ಪಡೆಗೆ ಅವಕಾಶ ಕೋರಿ ರಿಟ್ ಅರ್ಜಿದಾರರು ಹೈಕೋರ್ಟ್​​ಗೆ ಮನವಿ ಸಲ್ಲಿಸಿದ್ದರು. ಇಂದು (ಜ.2) ಹೈಕೋರ್ಟ್ ಮನವಿ ಪುರಸ್ಕರಿಸಿದೆ. 3 ದಿನಗಳಲ್ಲಿ ರಿಟ್ ಅರ್ಜಿ ತಿದ್ದುಪಡಿಗೆ ಹೈಕೋರ್ಟ್ ಸೂಚನೆ‌ ನೀಡಿದೆ. ಹೈಕೋರ್ಟ್  ಮತ್ತೆ ವಿಚಾರಣೆಯನ್ನು ಜನವರಿ 12ಕ್ಕೆ ನಿಗದಿಪಡಿಸಿದೆ. ಹೈಕೋರ್ಟ್ ಹಿಂದೂ ಕಾನೂನಿನಡಿ ಮಠಾಧಿಪತಿಗಳ ಅಧಿಕಾರ ವ್ಯಾಪ್ತಿ ಹಾಗೂ ಇತ್ಯಾದಿಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಲು ಸೂಚಿಸಿದೆ.

TV9 Kannada


Leave a Reply

Your email address will not be published. Required fields are marked *