Petrol Price on November 16: ಪೆಟ್ರೋಲ್, ಡೀಸೆಲ್ ಖರೀದಿಸುವವರೇ ಗಮನಿಸಿ; ಇಂದಿನ ಇಂಧನದ ಬೆಲೆ ಹೀಗಿದೆ – Petrol Price on November 16: Diesel Price Today Check Latest Fuel Price in Bengaluru other Cities Kannada News


Fuel Price Today: ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್‌ಗೆ 6 ರೂ. ಕಡಿತಗೊಳಿಸಿದ್ದರಿಂದ ಮೇ ತಿಂಗಳಲ್ಲಿ ಇಂಧನದ ಬೆಲೆಯಲ್ಲಿ ಕೊಂಚ ಏರಿಳಿತ ಕಂಡುಬಂದಿತ್ತು.

Petrol Price on November 16: ಪೆಟ್ರೋಲ್, ಡೀಸೆಲ್ ಖರೀದಿಸುವವರೇ ಗಮನಿಸಿ; ಇಂದಿನ ಇಂಧನದ ಬೆಲೆ ಹೀಗಿದೆ

ಪೆಟ್ರೋಲ್, ಡೀಸೆಲ್ ಬೆಲೆ

Fuel Price on November 16: ಪೆಟ್ರೋಲ್ (Petrol Price) ಮತ್ತು ಡೀಸೆಲ್ ಬೆಲೆಗಳು (Diesel Price) ಇಂದು (ಬುಧವಾರ) ಬದಲಾಗದೆ ಹಾಗೇ ಉಳಿದಿವೆ. ಇಂಧನ ಬೆಲೆಗಳು 5 ತಿಂಗಳಿನಿಂದ ಸ್ಥಿರವಾಗಿವೆ. ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪ್ರತಿದಿನ ಪರಿಷ್ಕರಿಸಲಾಗುತ್ತದೆ. ಇಂಧನದ ಬೆಲೆಗಳ ಪರಿಷ್ಕರಣೆಯನ್ನು ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ಮಾಡುತ್ತವೆ. ಇಂದು ಕೂಡ ದೇಶದ 4 ಮಹಾನಗರಗಳಲ್ಲಿ ಇಂಧನದ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ…

ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್‌ಗೆ 6 ರೂ. ಕಡಿತಗೊಳಿಸಿದ್ದರಿಂದ ಮೇ ತಿಂಗಳಲ್ಲಿ ಇಂಧನದ ಬೆಲೆಯಲ್ಲಿ ಕೊಂಚ ಏರಿಳಿತ ಕಂಡುಬಂದಿತ್ತು. ಪರಿಷ್ಕೃತ ದರಗಳ ಪ್ರಕಾರ, ಭಾರತದ ಪ್ರಮುಖ ಮೆಟ್ರೋಪಾಲಿಟನ್ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಗಳು ಹೀಗಿವೆ…

ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ಕ್ರಮವಾಗಿ 96.72 ಮತ್ತು 89.62 ರೂ. ಆಗಿದೆ.
ಮುಂಬೈನಲ್ಲಿ ಪೆಟ್ರೋಲ್‌ಗೆ 106.31 ರೂ ಮತ್ತು ಡೀಸೆಲ್‌ಗೆ 94.27 ರೂ.
ಚೆನ್ನೈನಲ್ಲಿ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ.
ಕೋಲ್ಕತ್ತಾ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ.
ನೋಯ್ಡಾದಲ್ಲಿ ಪೆಟ್ರೋಲ್ 96.76 ರೂ. ಮತ್ತು ಡೀಸೆಲ್ ಲೀಟರ್‌ಗೆ 89.93 ರೂ.
ಲಕ್ನೋದಲ್ಲಿ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ ಲೀಟರ್‌ಗೆ 89.76 ರೂ.
ಜೈಪುರದಲ್ಲಿ ಪೆಟ್ರೋಲ್ 108.48 ರೂ. ಮತ್ತು ಡೀಸೆಲ್ ಲೀಟರ್‌ಗೆ 93.72 ರೂ.
ತಿರುವನಂತಪುರದಲ್ಲಿ ಪೆಟ್ರೋಲ್ 107.71 ರೂ. ಮತ್ತು ಡೀಸೆಲ್ ಲೀಟರ್‌ಗೆ 96.52 ರೂ.
ಪಾಟ್ನಾದಲ್ಲಿ ಪೆಟ್ರೋಲ್ 108.12 ರೂ. ಮತ್ತು ಡೀಸೆಲ್ ಲೀಟರ್‌ಗೆ 94.86 ರೂ.
ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ ಲೀಟರ್‌ಗೆ 87.89 ರೂ.
ಹೈದರಾಬಾದ್‌ನಲ್ಲಿ ಪೆಟ್ರೋಲ್ 109.66 ರೂ. ಮತ್ತು ಡೀಸೆಲ್ ಲೀಟರ್‌ಗೆ 97.82 ರೂ. ಆಗಿದೆ.

TV9 Kannada


Leave a Reply

Your email address will not be published.