Petrol Price on November 8: ಬಳ್ಳಾರಿಯಲ್ಲಿ ಪೆಟ್ರೋಲ್ ಬೆಲೆ 1 ರೂ. ಕುಸಿತ; ಬೆಂಗಳೂರು ಸೇರಿ ಪ್ರಮುಖ ನಗರಗಳ ಇಂದಿನ ಡೀಸೆಲ್ ದರ ಹೀಗಿದೆ – Petrol Price on November 8 Petrol Rate and diesel Price get cheaper in Bellary Fuel Price Today


Fuel Price Today: ಒಪೆಕ್ ರಾಷ್ಟ್ರಗಳ ಉತ್ಪಾದನೆ ಕಡಿತದಿಂದಾಗಿ ಕಚ್ಚಾ ತೈಲದ ಬೆಲೆ ಹೆಚ್ಚುತ್ತಿದೆ. ಇಂದು ಕರ್ನಾಟಕದ ಬಳ್ಳಾರಿಯಲ್ಲಿ ಪೆಟ್ರೋಲ್ ಬೆಲೆ 1 ರೂ. ಕುಸಿತವಾಗಿದೆ.

Petrol Price on November 8: ಬಳ್ಳಾರಿಯಲ್ಲಿ ಪೆಟ್ರೋಲ್ ಬೆಲೆ 1 ರೂ. ಕುಸಿತ; ಬೆಂಗಳೂರು ಸೇರಿ ಪ್ರಮುಖ ನಗರಗಳ ಇಂದಿನ ಡೀಸೆಲ್ ದರ ಹೀಗಿದೆ

ಪೆಟ್ರೋಲ್ ಮತ್ತು ಡೀಸೆಲ್ ದರ

Fuel Price on November 8: ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ದಾಖಲೆಯ ಮಟ್ಟಕ್ಕೆ ಕುಸಿದಿದ್ದ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಏರಿಕೆ ಕಾಣುತ್ತಿದೆ. ಆದರೆ, ದೇಶಿಯ ಮಾರುಕಟ್ಟೆಯಲ್ಲಿ ಇದರ ಪರಿಣಾಮ ಇನ್ನೂ ಕಾಣಿಸುತ್ತಿಲ್ಲ. ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ (Petrol Price) -ಡಿಸೇಲ್ ಬೆಲೆ (Diesel Price) ಮೊದಲ ಹಂತದಲ್ಲೇ ಮುಂದುವರಿದಿದ್ದು, ಇದರಿಂದ ಜನಸಾಮಾನ್ಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಇಂದು ಬೆಳಿಗ್ಗೆ ಕಚ್ಚಾ ತೈಲ ಪ್ರತಿ ಬ್ಯಾರೆಲ್‌ಗೆ 92.01 ರೂ. ಏರಿಕೆ ಕಂಡಿದೆ. ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್​ಗೆ 97.95 ರೂ. ತಲುಪಿದೆ. ಒಪೆಕ್ ರಾಷ್ಟ್ರಗಳ ಉತ್ಪಾದನೆ ಕಡಿತದಿಂದಾಗಿ ಕಚ್ಚಾ ತೈಲದ ಬೆಲೆ ಹೆಚ್ಚುತ್ತಿದೆ. ಇಂದು ಕರ್ನಾಟಕದ ಬಳ್ಳಾರಿಯಲ್ಲಿ ಪೆಟ್ರೋಲ್ ಬೆಲೆ 1 ರೂ. ಕುಸಿತವಾಗಿದೆ.

5 ತಿಂಗಳಿನಿಂದ ದೇಶಾದ್ಯಂತ ಇಂಧನದ ಬೆಲೆಗಳು ಸ್ಥಿರವಾಗಿವೆ. ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಇಂಧನದ ಬೆಲೆಗಳ ಪರಿಷ್ಕರಣೆಯನ್ನು ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ಮಾಡುತ್ತವೆ. ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್‌ಗೆ 6 ರೂ. ಕಡಿತಗೊಳಿಸಿದ್ದರಿಂದ ಮೇ ತಿಂಗಳ ಅಂತ್ಯದಲ್ಲಿ ಇಂಧನದ ಬೆಲೆಗಳಲ್ಲಿ ದೇಶಾದ್ಯಂತ ಏರಿಳಿತ ಕಂಡುಬಂದಿತ್ತು. ಇಂದು ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ…

ಪರಿಷ್ಕೃತ ದರಗಳ ಪ್ರಕಾರ, ಭಾರತದ ಪ್ರಮುಖ ಮೆಟ್ರೋಪಾಲಿಟನ್ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಗಳು ಹೀಗಿವೆ…

ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ಕ್ರಮವಾಗಿ 96.72 ಮತ್ತು 89.62 ರೂ. ಆಗಿದೆ.
ಮುಂಬೈನಲ್ಲಿ ಪೆಟ್ರೋಲ್‌ಗೆ 106.31 ರೂ ಮತ್ತು ಡೀಸೆಲ್‌ಗೆ 94.27 ರೂ.
ಚೆನ್ನೈ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ.
ಕೋಲ್ಕತ್ತಾ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ.
ನೋಯ್ಡಾದಲ್ಲಿ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ ಲೀಟರ್‌ಗೆ 89.96 ರೂ.
ಲಕ್ನೋದಲ್ಲಿ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ ಲೀಟರ್‌ಗೆ 89.76 ರೂ.
ಜೈಪುರದಲ್ಲಿ ಪೆಟ್ರೋಲ್ 108.48 ರೂ. ಮತ್ತು ಡೀಸೆಲ್ ಲೀಟರ್‌ಗೆ 93.72 ರೂ.
ತಿರುವನಂತಪುರದಲ್ಲಿ ಪೆಟ್ರೋಲ್ 107.71 ರೂ. ಮತ್ತು ಡೀಸೆಲ್ ಲೀಟರ್‌ಗೆ 96.52 ರೂ.
ಪಾಟ್ನಾದಲ್ಲಿ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ ಲೀಟರ್‌ಗೆ 94.04 ರೂ.
ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ ಲೀಟರ್‌ಗೆ 87.89 ರೂ.
ಹೈದರಾಬಾದ್‌ನಲ್ಲಿ ಪೆಟ್ರೋಲ್ 109.66 ರೂ. ಮತ್ತು ಡೀಸೆಲ್ ಲೀಟರ್‌ಗೆ 97.82 ರೂ. ಆಗಿದೆ.

TV9 Kannada


Leave a Reply

Your email address will not be published.