Petrol Price Today: ಕಳೆದ 18 ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರ; ಬೆಂಗಳೂರಿನಲ್ಲಿ ಬೆಲೆ ಎಷ್ಟಿದೆ? | Petrol Rate and Diesel Rate unchanged today on 24th April 2022 check price in Bengaluru Delhi and other cities


Petrol Price Today: ಕಳೆದ 18 ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರ; ಬೆಂಗಳೂರಿನಲ್ಲಿ ಬೆಲೆ ಎಷ್ಟಿದೆ?

ಪ್ರಾತಿನಿಧಿಕ ಚಿತ್ರ

Petrol Diesel Price Today | ದೆಹಲಿ: ದೇಶದಲ್ಲಿ ಕಳೆದ 18 ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಕೆಲ ತಿಂಗಳ ಮೊದಲು ಇಳಿಕೆಯಾಗಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮಾರ್ಚ್ 22ರಿಂದ ಏರಿಸಲಾಗುತ್ತಿತ್ತು. ಇದರಿಂದ ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ (Petrol Price) ಪ್ರತಿ ಲೀಟರ್​ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿತ್ತು. ಮೊದಲ ನಾಲ್ಕು ದಿನಗಳಲ್ಲಿ ಇಂಧನ ಬೆಲೆಗಳನ್ನು ದಿನಕ್ಕೆ ಪ್ರತಿ ಲೀಟರ್​ಗೆ ತಲಾ 80 ಪೈಸೆಯಂತೆ ಹೆಚ್ಚಿಸಿದ್ದರೆ, ನಂತರದ ದಿನಗಳಲ್ಲಿ ಪೆಟ್ರೋಲ್ ಧಾರಣೆಯನ್ನು ಲೀಟರ್​ಗೆ 50 ಮತ್ತು 30, ಮತ್ತೆ 80 ಪೈಸೆಯಷ್ಟು ಹೆಚ್ಚಿಸಲಾಗಿತ್ತು. ಆದರೆ ಕಳೆದ 18 ದಿನಗಳಿಂದ ದರ ಸ್ಥಿರವಾಗಿದೆ. ಇಂದು (ಭಾನುವಾರ, ಏಪ್ರಿಲ್ 24, 2022) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ಬೆಂಗಳೂರು, ದೆಹಲಿ ಸೇರಿದಂತೆ ವಿವಿಧ ನಗರಗಳ ಇಂಧನ ದರ ಎಷ್ಟಿದೆ? ಈ ಕುರಿತ ಮಾಹಿತಿ ಇಲ್ಲಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ.

ಬೆಂಗಳೂರಿನಲ್ಲಿ ದರ ಎಷ್ಟಿದೆ?

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html

TV9 Kannada


Leave a Reply

Your email address will not be published. Required fields are marked *