Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? | Petrol Price and Diesel Prices are unchanged today on May 19th 2022 check rate in Bengaluru Delhi and other major cities


Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ಪ್ರಾತಿನಿಧಿಕ ಚಿತ್ರ

Petrol Price | Diesel Price on 19.05.2022: ದೇಶದಲ್ಲಿ ಕಳೆದ 6 ವಾರಗಳಿಂದ ಇಂಧನ ದರ ಸ್ಥಿರವಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ.

ಕೆಲವು ವರದಿಗಳ ಪ್ರಕಾರ ಸರ್ಕಾರವು ಮತ್ತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಲು ನಿರ್ಧರಿಸಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲ. ಬ್ಯುಸಿನೆಸ್ ಟುಡೆ ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದ್ದು, ಅದರಲ್ಲಿ ಒಂದೇ ಬಾರಿ ದರವನ್ನು ಏರಿಸದೇ ಶ್ರೇಣೀಕೃತ ಮಾದರಿಯಲ್ಲಿ ಏರಿಸುವ ಪ್ರಸ್ತಾಪವಿದೆ ಎಂದು ಮಾಹಿತಿ ನೀಡಲಾಗಿದೆ. ಪೆಟ್ರೋಲ್​ಗಿಂತಲೂ ಡೀಸೆಲ್ ದರದಲ್ಲಿ ಹೆಚ್ಚು ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. ಈ ನಡುವೆ ಇಂದು (ಮೇ 19) ದೇಶದಲ್ಲಿ ಇಂಧನ ದರದಲ್ಲಿ ಏರಿಕೆ ಕಂಡುಬಂದಿಲ್ಲ. ಪ್ರಸ್ತುತ ಕಳೆದ ಆರು ವಾರಗಳಿಂದ ಪೆಟ್ರೋಲ್ (Petrol Price), ಡೀಸೆಲ್ ದರ (Diesel Price) ಸ್ಥಿರವಾಗಿದೆ. ಬೆಂಗಳೂರು, ದೆಹಲಿ ಸೇರಿದಂತೆ ವಿವಿಧ ನಗರಗಳ ಇಂಧನ ದರ ಎಷ್ಟಿದೆ? ಈ ಕುರಿತ ಮಾಹಿತಿ ಇಲ್ಲಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಇಂಧನ ದರ ಎಷ್ಟಿದೆ?

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.88 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.66 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

TV9 Kannada


Leave a Reply

Your email address will not be published. Required fields are marked *