Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? | Petrol and Diesel Rates are unchanged today on May 20th 2022 check price in Bengaluru Delhi and other cities


Petrol Price Today: ದೇಶದಲ್ಲಿ ಇಂಧನ ದರ ಸ್ಥಿರ; ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ಸಾಂದರ್ಭಿಕ ಚಿತ್ರ

Petrol price in Bengaluru | Diesel Price on 20.05.2022: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ.

ದೇಶದಲ್ಲಿ  ಕಳೆದ 44 ದಿನಗಳಿಂದ ಇಂಧನ ದರ ಸ್ಥಿರವಾಗಿದೆ. ಆದರೆ ಕೆಲವು ವರದಿಗಳ ಪ್ರಕಾರ ಸರ್ಕಾರವು ಮತ್ತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲ. ಮಾಧ್ಯಮವೊಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದ್ದು, ಅದರಲ್ಲಿ ಒಂದೇ ಬಾರಿ ದರವನ್ನು ಏರಿಸದೇ ಶ್ರೇಣೀಕೃತ ಮಾದರಿಯಲ್ಲಿ ಏರಿಸುವ ಪ್ರಸ್ತಾಪವಿದೆ ಎಂದು ಮಾಹಿತಿ ನೀಡಲಾಗಿದೆ. ಪೆಟ್ರೋಲ್​ಗಿಂತಲೂ ಡೀಸೆಲ್ ದರದಲ್ಲಿ ಹೆಚ್ಚು ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. ಇಂದು (ಮೇ 20) ದೇಶದಲ್ಲಿ ಪೆಟ್ರೋಲ್ (Petrol Price), ಡೀಸೆಲ್ ದರ (Diesel Price) ಸ್ಥಿರವಾಗಿದೆ. ಬೆಂಗಳೂರು, ದೆಹಲಿ ಸೇರಿದಂತೆ ವಿವಿಧ ನಗರಗಳ ಇಂಧನ ದರ ಎಷ್ಟಿದೆ? ಈ ಕುರಿತ ಮಾಹಿತಿ ಇಲ್ಲಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.94 ರೂಪಾಯಿ ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಇಂಧನ ದರ ಎಷ್ಟಿದೆ?

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.88 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.66 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

TV9 Kannada


Leave a Reply

Your email address will not be published. Required fields are marked *