Petrol Price Today: ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ನೋಡಿ | Petrol Rate and Diesel Rate on June 8th unchanged check price in Bengaluru Delhi Mumbai and other cities


Petrol Price Today: ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ನೋಡಿ

ಪ್ರಾತಿನಿಧಿಕ ಚಿತ್ರ

Petrol Rate | Diesel Rate 08.06.2022: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸ್ಥಿರವಾಗಿದೆ. ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಇಂಧನ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು: ಮೇ 21ರಂದು ಪೆಟ್ರೋಲ್ ಮೇಲಿನ ಸುಂಕವನ್ನು ಪ್ರತಿ ಲೀಟರ್‌ಗೆ 8 ಮತ್ತು ಡೀಸೆಲ್‌ಗೆ 6 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಲಾಗಿತ್ತು. ಪರಿಣಾಮ ದೇಶದಲ್ಲಿ ಇಂಧನ ದರ ಕಡಿಮೆಯಾಗಿತ್ತು. ನಂತರದಲ್ಲಿ ಇಂಧನ ದರದಲ್ಲಿ ಯಾವುದೇ ವ್ಯತ್ಯಾಸಗಳು ಕಂಡುಬಂದಿಲ್ಲ. ದೇಶದ ಪ್ರಮುಖ ನಗರಗಳಲ್ಲಿ ಇಂದು (ಬುಧವಾರ, ಜೂ.8) ಪೆಟ್ರೋಲ್ (Petrol Price), ಡೀಸೆಲ್​ ದರ (Diesel Price) ಸ್ಥಿರವಾಗಿದ್ದು, ದೆಹಲಿ, ಬೆಂಗಳೂರು, ಮುಂಬೈ ಮೊದಲಾದ ನಗರಗಳಲ್ಲಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ಗೆ 101.94 ರೂ ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ 87.89 ರೂ ದಾಖಲಾಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 111.35 ರೂ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 97.28 ರೂ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ 96.72 ಇದ್ದು, ಡೀಸೆಲ್ ಪ್ರತಿ ಲೀಟರ್‌ಗೆ ರೂ 89.62 ದಾಖಲಾಗಿದೆ.

ದೇಶದ ವಿವಿಧ ನಗರಗಳಲ್ಲಿ ಇಂಧನ ದರ ಎಷ್ಟಿದೆ?

ಚೆನ್ನೈ: ಪೆಟ್ರೋಲ್: ಲೀಟರ್‌ಗೆ 102.63 ರೂ, ಡೀಸೆಲ್: ಲೀಟರ್‌ಗೆ 94.24 ರೂ

ಕೋಲ್ಕತ್ತಾ: ಪೆಟ್ರೋಲ್: ಲೀಟರ್‌ಗೆ 106.03 ರೂ, ಡೀಸೆಲ್: 92.76 ರೂ

ಲಕ್ನೋ: ಪೆಟ್ರೋಲ್: ಪ್ರತಿ ಲೀಟರ್‌ಗೆ ₹ 96.57, ಡೀಸೆಲ್: ಪ್ರತಿ ಲೀಟರ್‌ಗೆ ₹ 89.76

ಇಂಧನ ದರದ ಕುರಿತು ಮತ್ತಷ್ಟು ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:

TV9 Kannada


Leave a Reply

Your email address will not be published.