Petrol Price Today: ಮತ್ತಷ್ಟು ಏರಿಕೆಯಾಯ್ತು ಇಂಧನ ದರ; ಎಷ್ಟಾಯ್ತು ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆ ಗೊತ್ತಾ? | Petrol Price increased today on 2021 October 14 check diesel price in Bangalore Mumbai Delhi and major city

Petrol Price Today: ಮತ್ತಷ್ಟು ಏರಿಕೆಯಾಯ್ತು ಇಂಧನ ದರ; ಎಷ್ಟಾಯ್ತು ಲೀಟರ್​ ಪೆಟ್ರೋಲ್​, ಡೀಸೆಲ್​ ಬೆಲೆ ಗೊತ್ತಾ?

ಸಾಂದರ್ಭಿಕ ಚಿತ್ರ

Petrol Diesel Price Today | ದೆಹಲಿ: ಸರ್ಕಾರಿ ತೈಲ ಕಂಪನಿಗಳಿಂದ ಇಂದು ( ಅಕ್ಟೋಬರ್ 14, ಗುರುವಾರ) ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಗಳು ಹೆಚ್ಚಾಗಿವೆ. ಕಳೆದ ಎರಡು ದಿನಗಳಿಂದ ಇಂಧನ ದರ (Fuel Price) ಸ್ಥಿರವಾಗಿತ್ತು. ಆ ಬಳಿಕ ಇಂದು ಮತ್ತೆ ತೈಲ ದರ ಏರಿಕೆ ಕಂಡಿದೆ. ಇಂದು ಲೀಟರ್ ಪೆಟ್ರೋಲ್ ದರದಲ್ಲಿ (Petrol Price) 31ರಿಂದ 35 ಪೈಸೆ ಏರಿಕೆ ಮಾಡಲಾಗಿದೆ. ಜತೆಗೆ ಲೀಟರ್ ಡೀಸೆಲ್ ದರ (Diesel Price) 34 ರಿಂದ 37 ಪೈಸೆ ಹೆಚ್ಚಳವಾಗಿದೆ. ಆ ಬಳಿಕ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರವೊಂದೇ ಅಲ್ಲದೇ ಲೀಟರ್ ಡೀಸೆಲ್ ದರವೂ ಸಹ 100ರ ಗಡಿ ದಾಟಿದೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 104.79 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.52 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 110.75 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.40 ರೂಪಾಯಿಗೆ ಏರಿಕೆ ಆಗಿದೆ. ಇನ್ನು, ಕೊಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 105.43 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.63 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.10 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.93 ರೂಪಾಯಿ ಇದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.html

TV9 Kannada

Leave a comment

Your email address will not be published. Required fields are marked *