Petrol Price Today: ಸತತ ಹನ್ನೆರಡು ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ | Petrol price unchanged today 2021 November 15 check diesel price in Bengaluru Delhi Mumbai and major city


Petrol Price Today: ಸತತ ಹನ್ನೆರಡು ದಿನಗಳಿಂದ ಪೆಟ್ರೋಲ್​, ಡೀಸೆಲ್​ ಬೆಲೆ ಸ್ಥಿರ

ಸಾಂದರ್ಭಿಕ ಚಿತ್ರ

Petrol Diesel Price Today | ದೆಹಲಿ: ಸತತ 12 ದಿನಗಳ ಕಾಲ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಇಂದು ಸೋಮವಾರ (ನವೆಂಬರ್ 15) ಇಂಧನ ದರ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಇದಕ್ಕೂ ಮೊದಲು ನವೆಂಬರ್ 4ರಂದು ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿತು. ಇದರಿಂದ ಪೆಟ್ರೋಲ್, ಡೀಸೆಲ್ ಬೆಲೆಯು ದಾಖಲೆಯ ಗರಿಷ್ಠ ಮಟ್ಟದಿಂದ ಸ್ವಲ್ಪ ಕಡಿಮೆ ಆಯಿತು. ಆ ನಂತರದಲ್ಲಿ ಇಂಧನ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.76 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.htm

TV9 Kannada


Leave a Reply

Your email address will not be published. Required fields are marked *