Petrol Price Today: ಸತತ 22 ದಿನಗಳ ಕಾಲ ಇಂಧನ ದರ ಸ್ಥಿರ; ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ಮಾಹಿತಿ | Petrol price unchanged today 2021 November 26 check diesel price in Bengaluru Delhi Mumbai and major city

Petrol Price Today: ಸತತ 22 ದಿನಗಳ ಕಾಲ ಇಂಧನ ದರ ಸ್ಥಿರ; ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ಮಾಹಿತಿ

ಸಾಂದರ್ಭಿಕ ಚಿತ್ರ

Petrol Diesel Price Today | ದೆಹಲಿ: ಸತತ 22 ದಿನಗಳ ಕಾಲ ಇಂಧನ ದರದಲ್ಲಿ ಯವುದೇ ಬದಲಾವಣೆಗಳಾಗಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಶುಕ್ರವಾರ (ನವೆಂಬರ್ 26) ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ. ನವೆಂಬರ್ 4ರಂದು ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದು, ಆಗ ಇಂಧನ ದರದಲ್ಲಿ ಇಳಿಕೆ ಕಂಡು ಬಂದಿತ್ತು. ಆ ನಂತರದ ದಿನಗಳಲ್ಲಿ ಬೆಲೆಯಲ್ಲಿ ಯಾವುದೇ ಇಳಿಕೆ ಬಂದಿಲ್ಲ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 86.67 ರೂಪಾಯಿ ದಾಖಲಾಗಿದೆ.

ಕಳೆದ ತಿಂಗಳಿನಲ್ಲಿ ನಿರಂತರ ಏರಿಕೆ ಕಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಈ ತಿಂಗಳಿನಲ್ಲಿ ನಿರಂತರವಾಗಿ ಸ್ಥಿರತೆಯಲ್ಲಿದೆ. ದೀಪಾವಳಿ ಮುನ್ನಾ ದಿನ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತದ ಹೊರತಾಗಿ ಈ ತಿಂಗಳಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಆಗಿಲ್ಲ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿಗೆ ಮಾರಾಟವಾಗುತ್ತಿದೆ. ಬೆಲೆಗಳಲ್ಲಿ ಇಳಿಕೆಯ ಹೊರತಾಗಿಯೂ ಪ್ರಮುಖ ನಗರಗಳಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ 100ರ ಗಡಿಯಾಚೆಗೇ ಇದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರಪಾಯಿ ಇದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ದಾಖಲಾಗಿದೆ.

ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ:
https://tv9kannada.com/business/diesel-price-today.htm

TV9 Kannada

Leave a comment

Your email address will not be published. Required fields are marked *