ರಾಜಸ್ಥಾನದ ಅಜ್ಮೀರ್ನಲ್ಲಿರುವ ಪವಿತ್ರ ಸೂಫಿ ದರ್ಗಾವಾಗಿರುವ ಅಜ್ಮೀರ್ ಷರೀಫ್ ದರ್ಗಾಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ‘ಚಾದರ್’ ಹಸ್ತಾಂತರಿಸಿದರು.

ಅಜ್ಮೀರ್ ದರ್ಗಾಕ್ಕೆ ‘ಚಾದರ್’ ಹಸ್ತಾಂತರಿಸಿದ ಪ್ರಧಾನಿ ಮೋದಿ
ನವದೆಹಲಿ: ಪ್ರತಿ ವರ್ಷದಂತೆ ಈ ವರ್ಷವೂ ಸಹ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ರಾಜಸ್ಥಾನದ ಅಜ್ಮೀರ್ ದರ್ಗಾಕ್ಕೆ (Ajmer Sharif Dargah)ಅರ್ಪಿಸಲೆಂದು ಇಂದು (ಜನವರಿ 24) ಚಾದರವನ್ನು ಕಳುಹಿಸಿಕೊಟ್ಟಿದ್ದಾರೆ. ಇದನ್ನು ಪ್ರಧಾನಿ ಮೋದಿ ತಮ್ಮ ಟ್ವೀಟರ್ನಲ್ಲಿ ಹಂಚಿಕೊಂಡಿದ್ದಾರೆ. ಮೋದಿ ಅವರು ಖ್ವಾಜಾ ಮೊಯಿನುದ್ದೀನ್ ಚಿಸ್ತಿ ದರ್ಗಾಕ್ಕೆ ಚಾದರ್ ಹಸ್ತಾಂತರಿಸುತ್ತಿರುವುದು ಇದು 9ನೇ ಬಾರಿಯಾಗಿದೆ.