PNB Bank Recruitment 2022: ಪಂಜಾಬ್ ನ್ಯಾಷನಲ್​ ಬ್ಯಾಂಕ್​ನ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನ | PNB Bank Peon Recruitment 2022 Notification


PNB Bank Recruitment 2022: ಪಂಜಾಬ್ ನ್ಯಾಷನಲ್​ ಬ್ಯಾಂಕ್​ನ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನ

PNB Bank Recruitment 2022

PNB Bank Recruitment 2022: ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) 12ನೇ ತರಗತಿಯಲ್ಲಿ ಉತ್ತೀರ್ಣರಾದ ವ್ಯಕ್ತಿಗಳಿಂದ ಪ್ಯೂನ್ (ಗುಮಾಸ್ತ) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಹೀಗಾಗಿ ಅರ್ಜಿ ಪ್ರತಿಯನ್ನು ಭರ್ತಿ ಮಾಡಿ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಏಪ್ರಿಲ್ 22, 2022 (ಸಂಜೆ 5 ಗಂಟೆಯೊಳಗೆ)

ಅರ್ಹತಾ ಮಾನದಂಡಗಳು:

ವಯೋಮಿತಿ:
ಕನಿಷ್ಠ – 18 ವರ್ಷಗಳು
ಗರಿಷ್ಠ – 24 ವರ್ಷಗಳು

ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಯು 12 ನೇ ತರಗತಿ ಉತ್ತೀರ್ಣರಾಗಿರಬೇಕು. ಹಾಗೆಯೇ ಇಂಗ್ಲಿಷ್‌ನಲ್ಲಿ ಓದಲು / ಬರೆಯುವ ಜ್ಞಾನವನ್ನು ಹೊಂದಿರಬೇಕು.
ಇದು ಕನಿಷ್ಠ ಮತ್ತು ಗರಿಷ್ಠ ಎರಡೂ ಅರ್ಹತೆಯಾಗಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ.

ತಿಂಗಳ ವೇತನ:
ತಿಂಗಳಿಗೆ 14500/- ರಿಂದ 28145 ರೂ.ವರೆಗೆ ವೇತನ ನೀಡಲಾಗುತ್ತದೆ. ಇದರ ಜೊತೆಗೆ ಇತರೆ ಭತ್ಯೆಗಳು ಕೂಡ ಸಿಗಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಏಪ್ರಿಲ್ 22ರ ಮೊದಲು ಹೆಸರು ಸಂಪೂರ್ಣ ವಿವರಗಳನ್ನು ನಮೂದಿಸಿ, ಅರ್ಹತಾ ಪ್ರಮಾಣ ಪತ್ರದ ಪ್ರತಿಗಳೊಂದಿಗೆ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಬೇಕಾಗುತ್ತದೆ.

ಅರ್ಜಿ ಕಳುಹಿಸಬೇಕಾದ ವಿಳಾಸ:
“Chief Manager, HRD Department, Punjab National Bank, Circle Office Malda, PS English bazar, West Bengal -732101”.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

TV9 Kannada


Leave a Reply

Your email address will not be published.