ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ರಾಜೀನಾಮೆ ಅಭಿಯಾನದ ಬಗ್ಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ ಕುಮಾರ್ ಕಟೀಲ್ ಅವರಿಗೆ ಹೈಕಮಾಂಡ್ ಪ್ರಶ್ನೆ ಮಾಡಿದೆ.

ಬಿಜೆಪಿ ಕರ್ನಾಟಕ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್
ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ಯುವ ಮೋರ್ಚಾ ಕಾರ್ಯಕರ್ತರ ರಾಜೀನಾಮೆ ಅಭಿಯಾನದ ಬಗ್ಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ ಕುಮಾರ್ ಕಟೀಲ್ (Nalin Kumar Kateel) ಅವರಿಗೆ ಹೈಕಮಾಂಡ್ ಪ್ರಶ್ನೆ ಮಾಡಿದೆ. ಯುವ ಮೋರ್ಚಾ ಕಾರ್ಯಕರ್ತರು ಏಕೆ ರಾಜೀನಾಮೆ ನೀಡುತ್ತಿದ್ದಾರೆ? ರಾಜ್ಯ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳ ಸಮಸ್ಯೆ ಏನು? ಕೂಡಲೇ ಕಾರ್ಯಕರ್ತರ ಸಮಸ್ಯೆ ಬಗ್ಗೆ ಮಾತನಾಡಿ ಎಂದು ಪ್ರವೀಣ್ ನೆಟ್ಟಾರು ಪ್ರಕರಣ ಎನ್ಐಎಗೆ ವಹಿಸಿದ್ದಕ್ಕೆ ಧನ್ಯವಾದ ಹೇಳಲು 3 ದಿನಗಳ ಹಿಂದೆ ನಳೀನ ಕುಮಾರ್ ಕಟೀಲ್ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು (Amit Shah) ಭೇಟಿ ಮಾಡಿದ ವೇಳೆ ಕೇಳಿದ್ದಾರೆ.
ನಮ್ಮದು ಕಾರ್ಯಕರ್ತರ ಪಕ್ಷ, ಕಾರ್ಯಕರ್ತರನ್ನು ನಿರ್ಲಕ್ಷಿಸುವಂತಿಲ್ಲ. ಬಿಜೆಪಿ ಕಾರ್ಯಕರ್ತರನ್ನು ನಿರ್ಲಕ್ಷಿಸುವುದನ್ನು ಮೋದಿ ಸಹಿಸುವುದಿಲ್ಲ. ಹೀಗಾಗಿ ಯುವ ಮೋರ್ಚಾ ಕಾರ್ಯಕರ್ತರ ಬಗ್ಗೆ ಗಮನ ಹರಿಸುವಂತೆ ಸೂಚನೆ ನೀಡಿದ್ದಾರೆ.
ಅಮಿತ್ ಶಾ ಶಾ ಸೂಚನೆ ನಂತರ ನಿನ್ನೆ (ಆಗಸ್ಟ್ 5) ರಂದು ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಯುವ ಮೋರ್ಚಾ ಪದಾಧಿಕಾರಿಗಳ ಸಭೆ ನಡೆಸಿದ್ದಾರೆ.