Priyanka Gandhi Vadra: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಮತ್ತೊಮ್ಮೆ ಕೊವಿಡ್ ಪಾಸಿಟಿವ್ ದೃಢ | Priyanka Gandhi Vadra tests positive for Covid 19 second time in two months Kannada News


ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸಿ, ನಾನು ಮನೆಯಲ್ಲಿ ಕ್ವಾರಂಟೈನ್ ಆಗಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದವರಿಗೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನಾನು ವಿನಂತಿಸುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

Priyanka Gandhi Vadra: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಮತ್ತೊಮ್ಮೆ ಕೊವಿಡ್ ಪಾಸಿಟಿವ್ ದೃಢ

ಪ್ರಿಯಾಂಕಾ ಗಾಂಧಿ

Image Credit source: times now

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಅವರಿಗೆ ಮತ್ತೊಮ್ಮೆ ಕೊವಿಡ್ ಸೋಂಕು ಕಾಣಿಸಿಕೊಂಡಿದೆ. ಪ್ರಿಯಾಂಕಾ ಗಾಂಧಿಗೆ ಕೊವಿಡ್ -19 (COVID-19) ಪಾಸಿಟಿವ್ ದೃಢಪಟ್ಟಿದ್ದು, ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. ಈ ಬಗ್ಗೆ ಖುದ್ದು ಪ್ರಿಯಾಂಕಾ ವಾದ್ರಾ ಅವರೇ ಟ್ವೀಟ್ ಮಾಡಿದ್ದಾರೆ. ಕೊರೊನಾವೈರಸ್ ಆರ್ಭಟ ಶುರುವಾದ ಬಳಿಕ 2ನೇ ಬಾರಿಗೆ ಪ್ರಿಯಾಂಕಾ ಗಾಂಧಿಗೆ ಕೊವಿಡ್ ಪಾಸಿಟಿವ್ ಪತ್ತೆಯಾಗಿದೆ.

‘ನನಗೆ ಇಂದು ಮತ್ತೊಮ್ಮೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ವೈದ್ಯರ ಬಳಿ ತಪಾಸಣೆ ನಡೆಸಿದ ಬಳಿಕ ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ಎಲ್ಲ ಕೊವಿಡ್ ನಿಯಮಾವಳಿಗಳನ್ನೂ ಅನುಸರಿಸುತ್ತಿದ್ದೇನೆ’ ಎಂದು ಪ್ರಿಯಾಂಕಾ ಗಾಂಧ ವಾದ್ರಾ ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ಜೂನ್‌ 3ರಲ್ಲಿ ಪ್ರಿಯಾಂಕಾ ಗಾಂಧಿಗೆ ಕೊರೊನಾ ಪಾಸಿಟಿವ್‌ ಬಂದಿತ್ತು. ಪ್ರಿಯಾಂಕಾ ಗಾಂಧಿ ಕೊವಿಡ್ ಸೌಮ್ಯ ರೋಗಲಕ್ಷಣಗಳನ್ನು ಹೊಂದಿದ್ದಾರೆ ಎನ್ನಲಾಗಿದೆ. “ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸಿ, ನಾನು ಮನೆಯಲ್ಲಿ ಕ್ವಾರಂಟೈನ್ ಆಗಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದವರಿಗೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನಾನು ವಿನಂತಿಸುತ್ತೇನೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

TV9 Kannada


Leave a Reply

Your email address will not be published. Required fields are marked *