1/5
ಪ್ರೋ ಕಬಡ್ಡಿ ಲೀಗ್ ಸೀಸನ್ 8ರ ಮೊದಲಾರ್ಧ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 11 ಪಂದ್ಯಗಳನ್ನು ಆಡುವ ಮೂಲಕ ಬೆಂಗಳೂರು ಬುಲ್ಸ್ ಮೊದಲಾರ್ಧವನ್ನು ಪೂರ್ಣಗೊಳಿಸಿದೆ.
2/5
ಇನ್ನು ಕೆಲವೇ ಕೆಲವು ಪಂದ್ಯಗಳು ಮಾತ್ರ ಉಳಿದಿದ್ದು, ಇದಾದ ಬಳಿಕ ದ್ವಿತಿಯಾರ್ಧ ಆರಂಭವಾಗಬೇಕಿದೆ. ಅದರಂತೆ ದ್ವಿತಿಯಾರ್ಧದಲ್ಲಿ ಬೆಂಗಳೂರು ಬುಲ್ಸ್ ಮೊದಲ ಪಂದ್ಯವನ್ನು ಜನವರಿ 20 ರಂದು ಆಡಲಿದೆ. ಈ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಹಾಗೂ ಪಟ್ನಾ ಪೈರೇಟ್ಸ್ ತಂಡಗಳು ಮತ್ತೆ ಮುಖಾಮುಖಿಯಾಗಲಿದೆ.
3/5
ಇನ್ನು 2ನೇ ಪಂದ್ಯ ಜನವರಿ 23 ರಂದು ನಡೆಯಲಿದ್ದು, ಈ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಹಾಗೂ ಗುಜರಾತ್ ಜೈಂಟ್ಸ್ ಸೆಣಸಲಿದೆ. ಜನವರಿ 26 ರಂದು ನಡೆಯಲಿರುವ ಮೂರನೇ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಹಾಗೂ ದಬಾಂಗ್ ಡೆಲ್ಲಿ ಮುಖಾಮುಖಿಯಾಗಲಿದೆ. ಹಾಗೆಯೇ ಜನವರಿ 30 ರಂದು ನಡೆಯಲಿರುವ 4ನೇ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಹಾಗೂ ತೆಲುಗು ಟೈಟನ್ಸ್ ವಿರುದ್ದ ಸೆಣಸಲಿದೆ.