PSI ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆ ಪರೀಕ್ಷಾ ರದ್ದು ವಿಚಾರ: ಗೃಹ ಸಚಿವ ಆರಗ ಜ್ಞಾನೇಂದ್ರಗೆ ಪತ್ರ ಬರೆದ 8 ಶಾಸಕರು | PSI Recruitment Examition Cancellation: 8 MLAs who wrote a letter to Home Minister Aaraga Gnanendra,


PSI ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆ ಪರೀಕ್ಷಾ ರದ್ದು ವಿಚಾರ: ಗೃಹ ಸಚಿವ ಆರಗ ಜ್ಞಾನೇಂದ್ರಗೆ ಪತ್ರ ಬರೆದ 8 ಶಾಸಕರು

ಗೃಹ ಸಚಿವ ಆರಗ ಜ್ಞಾನೇಂದ್ರ

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಕಾರ್ಯಾಚರಣೆ ಮಂದುವರೆದಿದೆ. ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆ ಪರೀಕ್ಷಾ ರದ್ದು ವಿಚಾರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರಗೆ 8 ಶಾಸಕರು ಪತ್ರ ಬರೆದಿದ್ದಾರೆ.

ಬೆಂಗಳೂರು: PSI ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆ ಪರೀಕ್ಷಾ ರದ್ದು ವಿಚಾರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರಗೆ 8 ಶಾಸಕರು ಪತ್ರ ಬರೆದಿದ್ದಾರೆ. ಶಾಸಕರಾದ ಕೆ.ಎಸ್.ಲಿಂಗೇಶ್, ಪಿ.ರಾಜೀವ್, ಸುನಿಲ್ ನಾಯ್ಕ್, ರಘುಪತಿ ಭಟ್, ರಾಜಕುಮಾರ್ ತೇಲ್ಕೂರ್, ಹರೀಶ್ ಪೂಂಜಾ, ಲಾಲಾಜಿ ಮೆಂಡನ್, J.N.ಗಣೇಶ್, ರಾಘವೇಂದ್ರ ಹಿಟ್ನಾಳ್ ಪತ್ರ ಬರೆದಿದ್ದು, ಕೆಲವರು ಮಾಡಿದ ತಪ್ಪಿಗೆ ಸಂಪೂರ್ಣ ಪರೀಕ್ಷೆ ರದ್ದುಪಡಿಸಲಾಗಿದೆ. ಸರ್ಕಾರದ ಈ ನಿರ್ಧಾರದಿಂದ ಬಡ ಮಕ್ಕಳಿಗೆ ಅನ್ಯಾಯವಾಗಿದೆ. ಪಿಎಸ್​ಐ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದವರಿಗೆ ಶಿಕ್ಷೆ ಆಗಬೇಕು. ಜೊತಗೆ ಬಡಮಕ್ಕಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ತನಿಖೆ ಪೂರ್ಣವಾಗುವ ಮೊದಲೇ PSI ಪರೀಕ್ಷೆ ರದ್ದು ಸರಿಯಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು, ಪ್ರಾಮಾಣಿಕರಿಗೆ ನ್ಯಾಯ ಸಿಗಬೇಕು ಎಂದು ಗೃಹ ಸಚಿವರಿಗೆ 8 ಶಾಸಕರು ಪತ್ರದ ಮೂಲಕ ಮನವಿ ಮಾಡಿದ್ದಾರೆ. ಮನವಿ ಮಾಡಿರುವವರ ಪೈಕಿ ಬಿಜೆಪಿ ಶಾಸಕರೆ ಹೆಚ್ಚು ಎನ್ನಲಾಗುತ್ತಿದೆ.

TV9 Kannada


Leave a Reply

Your email address will not be published. Required fields are marked *